ಕೃಷಿ ಸಚಿವ ಬಿ. ಸಿ. ಪಾಟೀಲ್ 
ರಾಜ್ಯ

ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನಲ್ಲಿ ರಾಜ್ಯದ 51.19 ಲಕ್ಷ ರೈತರಿಗೆ 1, 023 ಕೋಟಿ ರೂ. ಬಿಡುಗಡೆ

ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ  ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ  ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡುತ್ತಿದೆ.

ಈ ಅನುದಾನವನ್ನು 2 ಸಾವಿರ ರೂ. ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಇಲ್ಲಿಯವರಿಗೆ 55.06 ಲಕ್ಷ  ರೈತ ಕುಟುಂಬಗಳು 1ನೇ ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ. 2019ರ ಮಾರ್ಚ್ ನಿಂದ ಜುಲೈ 2021ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6940.07 ಕೋಟಿ ರೂ. ಗಳ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ  ರೂ. ಗಳ ಆರ್ಥಿಕ ಸಹಾಯಧವನ್ನು ನೀಡಲಾಗಿದೆ. ಆಧಾರಿತ ಆಧಾರಿತ ಡಿಬಿಟಿ ಮುಖಾಂತರ ಪಾವತಿಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

 ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ಅತಿ ಹೆಚ್ಚು ಶೇಕಡವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ ಎಂದು ಬಿಸಿ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ಪೈರಸಿ ವಿರುದ್ಧ ಕಠಿಣ ಕ್ರಮಕ್ಕೆ Telegramಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ; 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ