ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 31 ಸಾವು: ಬೆಂಗಳೂರಿನಲ್ಲಿ 315 ಸೇರಿ ಇಂದು 1,338 ಕೊರೋನಾ ಪ್ರಕರಣ ಪತ್ತೆ!

Vishwanath S

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,338 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,21,049ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 31 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,848ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 315 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,31,097ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,61,499ಕ್ಕೆ ಏರಿಕೆಯಾಗಿದೆ. ಇನ್ನು 22,676 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,26,400 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,338 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.05ಕ್ಕೆ ಇಳಿದಿದೆ.

SCROLL FOR NEXT