ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಪ್ರವೇಶ ಕೋರಿ ಅರ್ಜಿ ಸ್ವೀಕರಿಸುತ್ತಿರುವ ವಿದ್ಯಾರ್ಥಿನಿಯರು 
ರಾಜ್ಯ

ಪ್ರಥಮ ಪಿಯುಸಿಗೆ ಪ್ರವೇಶ ಆರಂಭ; ಆಗಸ್ಟ್ 16ರಿಂದ ಆನ್ ಲೈನ್ ತರಗತಿಗಳು

ರಾಜ್ಯಾದ್ಯಂತ ಪ್ರಥಮ ಪಿಯುಸಿ ತರಗತಿಗೆ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ದಿನವೇ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗೆ ಆರಂಭವಾಗಿದ್ದು ಆಗಸ್ಟ್ 31ರವರೆಗೆ ಮುಂದುವರಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಆರ್ ಸ್ನೆಹಲ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಪ್ರಥಮ ಪಿಯುಸಿ ತರಗತಿಗೆ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ದಿನವೇ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗೆ ಆರಂಭವಾಗಿದ್ದು ಆಗಸ್ಟ್ 31ರವರೆಗೆ ಮುಂದುವರಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಆರ್ ಸ್ನೆಹಲ್ ತಿಳಿಸಿದ್ದಾರೆ.

ಈ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 16ರಿಂದ ಆನ್ ಲೈನ್ ತರಗತಿಗಳು ಪ್ರಾರಂಭವಾಗಲಿವೆ.

ವಿಳಂಬ ಪ್ರವೇಶಕ್ಕೆ ದಂಡ: ಇನ್ನು ಆಗಸ್ಟ್ 31ರ ನಂತರ ಪ್ರವೇಶ ಪಡೆದವರಿಗೆ ಇಲಾಖೆ ದಂಡ ವಿಧಿಸಲಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ ಪ್ರವೇಶ ಪಡೆದವರಿಗೆ 670 ರೂಪಾಯಿ ದಂಡ, ಸೆಪ್ಟೆಂಬರ್ 13ರಿಂದ 25ರವರೆಗೆ ಪ್ರವೇಶ ಪಡೆದವರಿಗೆ 2 ಸಾವಿರದ 890 ರೂಪಾಯಿ ದಂಡ ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು ಪ್ರವೇಶ ಪಡೆದು ಶುಲ್ಕ ಪಾವತಿಸಿದ ದಿನವೇ ಕಾಲೇಜುಗಳು ಇಲಾಖೆಗೆ ಶುಲ್ಕ ಪಾವತಿಸಬೇಕಾಗುತ್ತದೆ.

ಈ ಮಧ್ಯೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಪತ್ರ ಬರೆದಿರುವ ಅನುದಾನರಹಿತ ಖಾಸಗಿ ಶಾಲೆಗಳ ವ್ಯವಸ್ಥಾಪಕ ಒಕ್ಕೂಟ(ರೂಪ್ಸ), ಎಸ್ ಎಸ್ ಎಲ್ ಸಿ ಪರೀಕ್ಷೆ ಪಡೆದು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಪಿಯುಸಿ ಅಥವಾ ಅದಕ್ಕೆ ಸಮನಾದ ಶಿಕ್ಷಣಕ್ಕೆ ಪ್ರವೇಶಾತಿ ಕಲ್ಪಿಸಬೇಕೆಂದು ಕೋರಿದೆ.

ಈ ಸಂಬಂಧ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಕಳೆದ ವರ್ಷ ಕೇವಲ 6.23 ಲಕ್ಷ ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಪ್ರವೇಶಾತಿ ಕಲ್ಪಿಸಲಾಗಿತ್ತು. ಈ ವರ್ಷ 8.7 ಲಕ್ಷ ರಾಜ್ಯ ಸರ್ಕಾರದ ಪಠ್ಯಕ್ರಮದಡಿ 10ನೇ ತರಗತಿ ತೇರ್ಗಡೆ ಹೊಂದಿದ್ದು 12 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಕೋರುವ ಸಾಧ್ಯತೆಯಿದೆ ಎಂದು ರೂಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ಅಲ್ಲದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಹೆಚ್ಚುವರಿ 3 ಲಕ್ಷ ವಿದ್ಯಾರ್ಥಿಗಳಿಗೆ ಸಹ ಪಿಯುಸಿಗೆ ಪ್ರವೇಶ ಕೋರಲಾಗಿದೆ, ಪಿಯುಸಿ ಕಾಲೇಜಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನಿಯಮಿತ ಸಂಖ್ಯೆಯಿದ್ದರೂ ಪ್ರಸ್ತುತ ಸಾವಿರದ 234 ಕಾಲೇಜುಗಳಿವೆ. ಪ್ರಸ್ತುತ 6 ಸಾವಿರದ 250 ಖಾಯಂ ಉಪನ್ಯಾಸಕರಿದ್ದಾರಷ್ಟೆ. ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಎಂದು ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ