ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ 
ರಾಜ್ಯ

ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರೋತ್ಸವ ವೀಕ್ಷಣೆಗೆ ಕೇವಲ 1 ಸಾವಿರ ಮಂದಿಗೆ ಅವಕಾಶ

ಕೋವಿಡ್‌ ಹಿನ್ನೆಲೆಯಲ್ಲಿ 75ನೇಸ್ವಾತಂತ್ರೋತ್ಸವವನ್ನು ರಾಜ್ಯದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು ಕೇವಲ 1000 ಮಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ 75ನೇಸ್ವಾತಂತ್ರೋತ್ಸವವನ್ನು ರಾಜ್ಯದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು ಕೇವಲ 1000 ಮಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಶುಕ್ರವಾರ ಪಥಸಂಚಲನದ ಅಣಕು ಪ್ರದರ್ಶನ ವೀಕ್ಷಿಸಿದ  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಭಾನುವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ  ನೆರವೇರಿಸಿ , ಗೌರವ ವಂದನೆ ಸ್ವೀಕರಿಸಲಿದ್ದಾರೆ.  ಕೋವಿಡ್ ಹಿನ್ನೆಲೆಯಲ್ಲಿ  1 ಸಾವಿರ  ಆಸನಗಳ ವ್ಯವಸ್ಥೆ ಮಾಡಲಾಗಿದೆ. 100 ಮಂದಿ ಕೋವಿಡ್ ವಾರಿಯರ್ಸ್ ಹಾಗೂ ಕೊರೋನಾ  ಸೋಂಕಿನಿಂದ ಗುಣಮುಖರಾದ 25 ಜನರಿಗೆ ಆಹ್ವಾನ ನೀಡಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು  ನಿಷೇಧಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕಿದೆ ಎಂದು ಮಾಹಿತಿ ನೀಡಿದರು.

ನಂತರ ಮಾತನಾಡಿದ ಕಮಲ್  ಪಂತ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1  ಸಾವಿರದ 500 ಪೊಲೀಸ್  ಸಿಬ್ಬಂದಿಯನ್ನು  ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.15  ಕೆಎಸ್ ಆರ್ ಪಿ, 10 ನಗರ ಸಶಸ್ತ್ರ ಪಡೆ ತುಕಡಿ ಜೊತೆಗೆ ಎರಡು ವಿಶೇಷ ಕಮಾಂಡೋ  ತಂಡಗಳನ್ನು ಭದ್ರತೆಗಾಗಿ ನಿಯೋಜಿಸಲಾಗುವುದು, ಪಾಸ್ ಇದ್ದವರಿಗೆ  ಮಾತ್ರ  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT