ಸಂಗ್ರಹ ಚಿತ್ರ 
ರಾಜ್ಯ

ಟರ್ಫ್ ಕ್ಲಬ್‌ ಬೆಟ್ಟಿಂಗ್ ಮೊತ್ತದ ಮೇಲಿನ ಜಿಎಸ್‌ಟಿ ರದ್ದು ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು ಟರ್ಫ್‌ ಕ್ಲಬ್ ಮತ್ತು ಮೈಸೂರು ರೇಸ್‌ ಕ್ಲಬ್‌ ಲಿಮಿಟೆಡ್‌ನಲ್ಲಿ ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ತೆರಿಗೆ ವಿಧಿಸುವ ಜಿಎಸ್‌ಟಿ ನಿಯಮಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಬೆಂಗಳೂರು ಟರ್ಫ್‌ ಕ್ಲಬ್ ಮತ್ತು ಮೈಸೂರು ರೇಸ್‌ ಕ್ಲಬ್‌ ಲಿಮಿಟೆಡ್‌ನಲ್ಲಿ ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ತೆರಿಗೆ ವಿಧಿಸುವ ಜಿಎಸ್‌ಟಿ ನಿಯಮಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮುರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶವನ್ನು ನೀಡಿದೆ. 

ಸ್ಟಾಕ್ ಬ್ರೋಕರ್‌ ಅಥವಾ ಟ್ರಾವೆಲ್‌ ಏಜೆಂಟ್‌ಗಳ ರೀತಿಯಲ್ಲಿ ಈ ಎರಡು ರೇಸ್ ಕ್ಲಬ್‌ಗಳು ಕೇವಲ ಕಮಿಷನ್ ಪಡೆದು ಕಾರ್ಯ ನಿರ್ವಹಿಸುತ್ತಿವೆ. ಈ ಕಾರಣದಿಂದ ಈ ಕ್ಲಬ್‌ಗಳು ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ಜಿಎಸ್‌ಟಿ ಪಾವತಿಸಲು ಆಗುವುದಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು. 

ಇದೇ ವೇಳೆ ಕೇಂದ್ರ ಸರಕು ಮತ್ತು ಸೇವೆಗಳ 2017ರ ನಿಯಮ 31ಎ(3) ಹಾಗೂ ಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ನಿಯಮ 31ಎ ಅನ್ನು ಈ ಎರಡು ರೇಸ್ ಕ್ಲಬ್‌ಗಳಿಗೆ ಅನ್ವಯ ಆಗುವಂತೆ ರದ್ದುಪಡಿಸಿತ್ತು.

‘ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 15ರಲ್ಲಿ ತೆರಿಗೆ ಮೌಲ್ಯಮಾಪನ ಮಾಡಲು ಅವಕಾಶ ಇದೆ. ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವೂ ಈ ನಿಯಮವನ್ನು ಎತ್ತಿ ಹಿಡಿದಿದೆ’ ಎಂದು ಮೇಲ್ಮನವಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವರಿಸಿವೆ. ಮುಂದಿನ ವಿಚಾರಣೆಯನ್ನು ಪೀಠ ಅಕ್ಟೋಬರ್ 7ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video