ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ 
ರಾಜ್ಯ

ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಮೇಲೆ ಕೊರೋನಾ ಕರಿಛಾಯೆ: ಸರಳ ಆಚರಣೆಗೆ ನಿರ್ಧಾರ, ಕೋವಿಡ್ ವಾರಿಯರ್ಸ್‌ಗೆ ಸನ್ಮಾನ

ಕಳೆದ ವರ್ಷದಂತೆ ಈ ಬಾರಿಯೂ ಮಹಾಮಾರಿ ಕೊರೋನಾ ವೈರಸ್ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಮೇಲೆ ಕರಿನೆರಳು ಬೀಳುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಕಳೆದ ವರ್ಷದಂತೆ ಈ ಬಾರಿಯೂ ಮಹಾಮಾರಿ ಕೊರೋನಾ ವೈರಸ್ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಮೇಲೆ ಕರಿನೆರಳು ಬೀಳುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಇದೇ ವೇಳೆ ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಗುತ್ತದೆ ಎಂದು ತಿಳಿದುಬಂದಿದೆ. 

ಕೊರೋನಾ ಸೋಂಕು ಇರುವುದರಿಂದ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಸದಿರಲು ಸರ್ಕಾರ ನಿರ್ಧರಿಸಿದೆ. 

ಭಾನುವಾರ ಬೆಳಿಗ್ಗೆ 8.55ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣೆಕ್ ಷಾ ಮೈದಾನಕ್ಕೆ ಆಗಮಿಸಲಿದ್ದಾರೆ. 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡುವರು. ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಪ್ರಸಕ್ತ ಬಾರಿಯೂ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ರದ್ದುಪಡಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಪ್ರವೇಶ ನಿರ್ಬಂಧ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು, ವಿಶೇಷ ಆಹ್ವಾನಿತರಿಗಾಗಿ 1,000 ಆಸನಗಳು, ವೇದಿಕೆ ಸಿದ್ಧಪಡಿಸಲಾಗಿದೆ. 

ಪ್ರತಿ ವರ್ಷ 30ಕ್ಕೂ ಹೆಚ್ಚು ತುಕಡಿಗಳಿಂದ ಪಥಸಂಚಲನ ನಡೆಯುತ್ತಿತ್ತು. ಆದರೆ, ಪ್ರಸಕ್ತ ವರ್ಷದಲ್ಲಿ 20 ತುಕಡಿಗಳಿಂದ ಮಾತ್ರ ಪಥ ಸಂಚಲನ ನಡೆಯಲಿದೆ. ಕೇವಲ 470 ಮಂದಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಎಳ್ಲಾ ಸಿಬ್ಬಂದಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಗಣ್ಯಾತಿಗಣ್ಯರು ಸೇರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತಲೂ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್, ಸಂಚಾರಿ ಪೊಲೀಸರು, ಶ್ವಾನದಳ, ಗೃಹ ರಕ್ಷಕ ದಳ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ, 60ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು, ಎರಡು ಬ್ಯಾಗೇಜ್ ಸ್ಕ್ಯಾನಿಂಗ್ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. 

ಕಾರ್ಯಕ್ರಮದಲ್ಲಿ ಕೊರೋನಾ ಸೋಂಕು ತಗುಲಿ ಗುಣಮುಖರಾದ 25 ಮಂದಿ ಸಾರ್ವಜನಿಕರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿದ್ದು, 100 ಮಂದಿ ಕೊರೋನಾ ವಾರಿಯರ್ಸ್ ಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಗುತ್ತದೆ. 

ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಗ್ನಿ ಅವಘಡಗಳು ಸಂಭವಿಸಿದ್ದಲ್ಲಿ ಕೂಡಲೇ ಪ್ರತಿಕ್ರಿಯಿಸಲು ಅಗತ್ಯವಿರುವ ಆ್ಯಂಬುಲೆನ್ಸ್ ಗಳು, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ. ಹಲವು ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆಗಳನ್ನು ಕಾಯ್ದಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!