ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 305 ಸೇರಿ ಇಂದು ರಾಜ್ಯದಲ್ಲಿ 1,431 ಕೊರೋನಾ ಪ್ರಕರಣ ಪತ್ತೆ; 21 ಸಾವು!

ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,431 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 15 Aug 2021, 7:18 pm

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,431 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 21 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 305 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,32,902ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

Advertisement

Advertisement

ರಾಜ್ಯದಲ್ಲಿ ಇಂದು 1,611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,69,962ಕ್ಕೆ ಏರಿಕೆಯಾಗಿದೆ. ಇನ್ನು 22,497 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,52,767 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,431 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93ಕ್ಕೆ ಇಳಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement