ರಾಜ್ಯ

'ಕಲ್ಯಾಣ ಕರ್ನಾಟಕ' ಹೆಸರಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು- ಮುರುಗೇಶ್ ನಿರಾಣಿ

Nagaraja AB

ಕಲಬುರಗಿ: ಕಲ್ಯಾಣ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, “ಕಲ್ಯಾಣ ಕರ್ನಾಟಕ” ಎಂಬ ಪದ ಅಕ್ಷರರೂಪದಲ್ಲಿ ಮಾತ್ರ ಇರದೇ ಅಭಿವೃದ್ಧಿಪಡಿಸುವ ಮೂಲಕ ಕಾರ್ಯರೂಪಕ್ಕೆ ತರಬೇಕಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಪ್ರತಿಪಾದಿಸಿದರು.

ಭಾನುವಾರ ನಗರದ ಡಿ.ಎ.ಆರ್ ಪೊಲೀಸ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಸಂದೇಶ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾದ ಕಲಬುರಗಿಯನ್ನು ಮುಂದಿನ 30 ವರ್ಷಗಳಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಕಲಬುರಗಿ ವಿಜನ್-2050 ಡಾಕ್ಯೂಮೆಂಟ್ ಸಿದ್ಧಪಡಿಸಲಾಗುತ್ತಿದ್ದು, ಇಂತಹ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಕ್ಕೆ ಜನಪ್ರತಿನಿಧಿಗಳು, ಬುದ್ಧಿಜೀವಿಗಳು, ಮಾಧ್ಯಮ ಮುಂತಾದ ಕ್ಷೇತ್ರದವರು ಸಹಕಾರ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಕೋರಿದರು.

SCROLL FOR NEXT