ರಾಜ್ಯ

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ: ಬೊಮ್ಮಾಯಿ

Srinivasamurthy VN

ಬೆಂಗಳೂರು: ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು . ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಪರಿಶಿಷ್ಟ ಪಂಡಗಳ ಸಮುದಾಯಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುವುದರ ಮೂಲಕ ತಳ ವರ್ಗದ ವರಿಗೆ ಸ್ವಾತಂತ್ರೋತ್ಸವದ ಕೊಡುಗೆ ನೀಡಿದ್ದಾರೆ.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿ, ಅವರು ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದು ಸರಕಾರದ ಆದ್ಯತೆಯಾಗಿದೆ ಎಂದರು.

ನಾಡಿನ ಮೂಲ ಸೌಲಭ್ಯ ಸುಧಾರಣೆ ಹಾಗೂ ಆರ್ಥಿಕ ಅಭಿವೃದ್ಧಿಗಳೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕು ಹಸನುಗೊಳಿಸುವುದು ಸರಕಾರದ ಕಾಳಜಿಯಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗಾಗಿ ಮೀಸಲಿರಿಸಿದ ಅನುದಾನ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ  ಬಳಕೆಯಾಗಬೇಕೆಂಬುದು ಸರ್ಕಾರ ಗುರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು.
 

SCROLL FOR NEXT