ಅರುಣ್ ಸಿಂಗ್ 
ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಖಾತೆ ಕ್ಯಾತೆ: ಅತೃಪ್ತ ಸಚಿವರ ಮನವೊಲಿಕೆಗೆ ಮುಂದಾದ ಕೇಂದ್ರ ನಾಯಕರು

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ಹಾಗೂ ಸೂಕ್ತ ಖಾತೆ ಸಿಗದೆ ಬೇಸರಗೊಂಡಿರುವ ನಾಯಕರ ಮನವೊಲಿಸಲು ಹಾಗೂ ಸಮಾಧಾನಪಡಿಸಲು ಇದೀಗ ಕೇಂದ್ರೀಯ ನಾಯಕತ್ವವೇ ಮುಂದೆ ಬಂದಿದೆ. 

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ಹಾಗೂ ಸೂಕ್ತ ಖಾತೆ ಸಿಗದೆ ಬೇಸರಗೊಂಡಿರುವ ನಾಯಕರ ಮನವೊಲಿಸಲು ಹಾಗೂ ಸಮಾಧಾನಪಡಿಸಲು ಇದೀಗ ಕೇಂದ್ರೀಯ ನಾಯಕತ್ವವೇ ಮುಂದೆ ಬಂದಿದೆ. 

ಖಾತೆ ಹಂಚಿಕೆ ಕುರಿತು ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, 2-3 ನಾಯಕರಿಗೆ ಖಾತೆ ಹಂಚಿಕೆ ತೃಪ್ತಿ ತಂದಿಲ್ಲ. ಹೀಗಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಆನಂದ್ ಸಿಂಗ್ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಮಾತುಕತೆ ಬಳಿಕ ಸಮಾಧಾನಗೊಂಡಿದ್ದಾರೆ. ಎಂಟಿಬಿ ನಾಗರಾಜ್ ಅವರು ಹೇಳಿಕೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬರ ಜೊತೆಗೂ ಮಾತುಕತೆ ನಡೆಸುತ್ತಿದ್ದೇನೆ. 2023ರ ಚುನಾವಣೆ ವೇಳೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂಬುದನ್ನು ನಾನು ತಿಳಿಸಿದ್ದೇನೆಂದು ಹೇಳಿದ್ದಾರೆ. 

ಇದೇ ವೇಳೆ ಸಾರ್ವಜನಿಕವಾಗಿ ಅಸಮಾಧಾನ ಹೊರಹಾಕುವವದನ್ನು ಪಕ್ಷದ ಹೈಕಮಾಂಡ್ ಒಪ್ಪುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ ಅರುಣ್ ಸಿಂಗ್ ಅವರು, ಹಂಚಿಕೆಯಾದ ಖಾತೆಗಳ ವಿಚಾರ ಬಿಟ್ಟು, 2023 ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಿಳಿಸಿದರು.

ಕೆಲಸಗಳಿಗೆ ಅನುದಾನ ಕೇಳುವ ಬದಲು, ಶಾಸಕರು ಸರ್ಕಾರದ ಯೋಜನೆಗಳು ಜನಪ್ರಿಯವಾಗಿದೆಯೇ ಮತ್ತು ಜನರಿಗೆ ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ. 

ಕೆಲ ಸಚಿವರು ಶಾಸಕರು ಹಾಗೂ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲು ವಾರದಲ್ಲಿ ಒಂದು ಮೀಸಲಿಡುವಂತೆ ಮನವಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸುವುದಕ್ಕೂ ಮುನ್ನ ಈ ರೀತಿಯ ನಿರ್ಧಾರವನ್ನು ನಮ್ಮ ಪಕ್ಷ ಕೈಗೊಂಡಿತ್ತು. ಇದೀಗ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮುಖ್ಯಮಂತ್ರಿಗಳ ಆಯ್ಕೆಯಿಂದ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯವರೆಗೆ ಎಲ್ಲಾ ನಿರ್ಧಾರವನ್ನೂ ಕೇಂದ್ರದ ನಾಯಕರು ಕೈಗೊಳ್ಳುತ್ತಾರೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿದ ಅವರು, ಈ ಆರೋಪಗಳೆಲ್ಲಾ ತಪ್ಪಾದದ್ದು. ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳುತ್ತಾರೆ. ಅದು ಅವರ ಪರಮಾಧಿಕಾರವಾಗಿದೆ. ಈ ಬಗ್ಗೆ ಕೇಂದ್ರ ನಾಯಕತ್ವದಿಂದ ಮಾರ್ಗದರ್ಶನ ಪಡೆಯುತ್ತಾರೆಂದು ಸ್ಪಷ್ಟಪಡಿಸಿದ್ದಾರೆ. 

ಬಳಿಕ ಪಕ್ಷದ ಬಲ ಹೆಚ್ಚಿಸುವಲ್ಲಿ ಹಾಗೂ 2023ರ ಚುನಾವಣೆ ಸಿದ್ಧತೆ ಕುರಿತು ಯಡಿಯೂರಪ್ಪ ಅವರ ಪಾತ್ರ ಕುರಿತು ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಯಡಿಯೂರಪ್ಪ ಅವರು ಅತ್ಯಂತ ಹಿರಿಯ ನಾಯಕರಾಗಿದ್ದಾರೆ. ಪ್ರತೀ ಸಂದರ್ಭದಲ್ಲಿಯೂ ರಾಜ್ಯದ ಪ್ರತೀ ಮೂಲೆಯನ್ನು ಸಂಪರ್ಕಿಸಿದ್ದಾರೆ. ರಾಜ್ಯದ ಜನರ ಮನಸ್ಥಿತಿ ಹಾಗೂ ಭಾವನೆಗಳು ಅವರಿಗೆ ಹೆಚ್ಚಾಗಿದೆ ತಿಳಿದಿದೆ. ಜನರೂ ಕೂಡ ಅವರನ್ನು ಇಷ್ಟ ಪಡುತ್ತಾರೆ. ಇದೀಗ ಅವರ ಪಾತ್ರವನ್ನು ಅವರೇ ನಿರ್ಧರಿಸಬೇಕು. ಅವರ ಅನುಭವ ಹಾಗೂ ಮಾರ್ಗದರ್ಶನವನ್ನು ಪಕ್ಷ ಖಂಡಿತವಾಗಿಯೂ ಪಡೆದುಕೊಳ್ಳಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT