ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಸ್ವಾಗತ ಕೋರಿದ ಸಿಎಂ 
ರಾಜ್ಯ

ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲರಿಂದ ಆತ್ಮೀಯ ಸ್ವಾಗತ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ.

ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಘನತೆವೆತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಸೋಮವಾರ ಬೆಳಗ್ಗೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಹಾರ ಹಾಕಿ ಮೈಸೂರು ಪೇಟವನ್ನು ತೊಡಿಸಿ ಸ್ವಾಗತಿಸಿದರು.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ನಗರದ ಜವಹರಲಾಲ್ ನೆಹರೂ ಸೆಂಟರ್‌ ಫಾರ್‌ ಅಡ್ವಾನ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT