ಮಹಿಳೆಯೊಬ್ಬರಿಗೆ ಲಸಿಕೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿ 
ರಾಜ್ಯ

ಮಹದೇವಪುರದಲ್ಲಿ ಕೊರೋನಾ ಅಬ್ಬರ: ಅತೀ ಹೆಚ್ಚು 85,761 ಕೋವಿಡ್ ಕೇಸ್ ಪತ್ತೆ

ನಗರದ ಮಹದೇವಪುರದಲ್ಲಿ ಕೋವಿಡ್ ಅಬ್ಬರ ಹೆಚ್ಚಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ ಅತ್ಯಂತ ಹೆಚ್ಚು 85,761 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 

ಬೆಂಗಳೂರು: ನಗರದ ಮಹದೇವಪುರದಲ್ಲಿ ಕೋವಿಡ್ ಅಬ್ಬರ ಹೆಚ್ಚಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ ಅತ್ಯಂತ ಹೆಚ್ಚು 85,761 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 

ಒಂದೇ ಕಡೆ ಅತ್ಯಧಿಕ ಜನರು ವಾಸಿಸುತ್ತಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. 

ಕ್ಷೇತ್ರದಲ್ಲಿ ಅತೀ ಹೆಚ್ಚು ಅಪಾರ್ಟ್ ಮೆಂಟ್ ಗಳಿದ್ದು, ಜನಸಂಖ್ಯೆ ಕೂಡ ಹೆಚ್ಚಾಗಿರುವುದರಿಂದ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಬಿಬಿಎಂಪಿ ಮಾಹಿತಿ ನೀಡಿರುವ ಪ್ರಕಾರ ಆಗಸ್ಟ್ 14ರವರೆಗೂ ಕ್ಷೇತ್ರದಲ್ಲಿ ಒಟ್ಟಾರೆ 85,761 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ. 

ಅಲ್ಲದೆ, ಕ್ಷೇತ್ರದಲ್ಲಿ ಒಟ್ಟು 462 ಸಕ್ರಿಯ ಪ್ರಕರಣಗಳಿದ್ದು, 597 ಸಾವುಗಳು ಸಂಭವಿಸಿವೆ. ಒಟ್ಟು 84,702 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕಳೆದ 14 ದಿನಗಳಿಂದ ಪಾಸಿಟಿವಿಟಿ ದರ ಅತ್ಯಂತ ಹೆಚ್ಚು ಶೇ.1.13ರಷ್ಟಿದ್ದು, ಮಹದೇವಪುರದಲ್ಲಿ ಅತ್ಯಂತ ಹೆಚ್ಚು ಕಂಟೈನ್ಮೆಂಟ್ ವಲಯಗಳಿವೆ ಎಂದು ಮಾಹಿತಿ ನೀಡಿದೆ. 

ಮಹದೇವಪುರ ವಲಯದ ಆರೋಗ್ಯಾಧಿಕಾರಿ, ಕ್ಷೇತ್ರದಲ್ಲಿ ಅತೀ ಹೆಚ್ಚು ಜನಸಂಖ್ಯೆಯಿದೆ. ಹೀಗಾಗಿಯೇ ಪ್ರಕರಣಗಳೂ ಕೂಡ ಹೆಚ್ಚಾಗಿವೆ. ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪ್ರತೀನಿತ್ಯ 6,000ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆರ್'ಟಿ-ಪಿಸಿಆರ್ ಪರೀಕ್ಷೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಇತರೆ ರಾಜ್ಯಗಳಿಂದ ಬರುವವರಿಂದ ಸೋಂಕು ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಸೋಂಕು ನಿಯಂತ್ರಿಸಲು ಅಧಿಕಾರಿಗಳು ಕ್ಷೇತ್ರದಲ್ಲಿ ಕಂಟೈನ್ಮೆಂಟ್ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಸೋಂಕಿತ ವ್ಯಕ್ತಿಗಳು ತಮ್ಮ ಮನೆಗಳಿಂದ ಹೊರಗೆ ಹೋಗದೆ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ತಂಡಗಳನ್ನು ರಚನೆ ಮಾಡಲಾಗಿದೆ. ಸೋಂಕಿತರ ಮನೆಗಳಿಗೆ ಸಿಬ್ಬಂದಿಗಳನ್ನು ಕಳುಹಿಸಿ ಅಗತ್ಯ ಸಹಾಯಗಳನ್ನು ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ ವಾಸಿಸುವ ಜನರು ಹೆಚ್ಚು ಸೋಂಕಿಗೊಳಗಾಗುತ್ತಿದ್ದಾರೆ. ಸೋಂಕು ಕಂಡುಬಂದ ಕೂಡಲೇ ನೆರೆಯ ಫ್ಲಾಟ್ ನಿವಾಸಿಗಳಿಗೆ ಮಾಹಿತಿ ನೀಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. 

ಇನ್ನು ಮಹದೇವಪುರದ ಮುಂದಿನ ಸ್ಥಾನವನ್ನು 74,555 ಪ್ರಕರಣಗಳೊಂದಿಗೆ ಬೊಮ್ಮನಹಳ್ಳಿ ಪಡೆದುಕೊಂಡಿದೆ. ಈ ಕ್ಷೇತ್ರದಲ್ಲಿ 399 ಸಕ್ರಿಯ ಪ್ರಕರಣಗಳಿದ್ದು, 699 ಸಾವುಗಳು ಸಂಭವಿಸಿವೆ. ಇನ್ನು 73,517 ಮಂದಿ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರಲ್ಲಿ ಅತೀ ಹೆಚ್ಚು ಸೋಂಕು ಪತ್ತೆಯಾಗಿವೆ. ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ಬರುತ್ತಿರುವ ಕಾರ್ಮಿಕರಲ್ಲಿ ಹೆಚ್ಚು ಸೋಂಕು ಪತ್ತೆಯಾಗುತ್ತಿವೆ. ಪ್ರಸ್ತುತ ಕ್ಷೇತ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆ ಇದಜೆ. ಪಾಸಿಟಿವಿಟಿ ದರ ಕೂಡ ಶೇ.1 ಕ್ಕಿಂತ ಕಡಿಮೆ ಇದೆ ಎಂದು ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ಹೇಳಿದ್ದಾರೆ. 

ಇನ್ನು ಚಾಮರಾಜಪೇಟೆಯಲ್ಲಿ ಅತ್ಯಂತ ಕಡಿಮೆ ಸಂಖ್ಯೆ ಇರುವುದು ಕಂಡು ಬಂದಿದೆ, ಮಾರುಕಟ್ಟೆ, ಅತೀ ಹೆಚ್ಚು ಅಂಗಡಿಗಳ, ಜನರ ಚಲನವಲನಗಳು ಹೆಚ್ಚಾಗಿದ್ದರೂ ಈ ಕ್ಷೇತ್ರದಲ್ಲಿ ಕಡಿಮೆ ಸೋಂಕು ಪತ್ತೆಯಾಗಿದೆ. ಚಾಮರಾಜಪೇಟೆಯಲ್ಲಿ 11,841 ಕೇಸ್ ಗಳು ಪತ್ತೆಯಾಗಿದ್ದು, 33 ಸಕ್ರಿಯ ಪ್ರಕರಣ, 233 ಸಾವುಗಳು ವರದಿಯಾಗಿವೆ. ಇನ್ನು ಸಕ್ರಿಯ ಪ್ರಕರಣಗಳ ದರ ಶೇ.0.14ರಷ್ಟಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT