ತುಂಗಭದ್ರಾ ಜಲಾಶಯಕ್ಕೆ ಬಾಗಿನ ಆರ್ಪಿಸಿದ ಸಚಿವ ಗೋವಿಂದ ಕಾರಜೋಳ 
ರಾಜ್ಯ

ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲು ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ: ಗೋವಿಂದ ಕಾರಜೋಳ

ನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಜಯನಗರ: ನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಹೊಸಪೇಟೆ ಸಮೀಪದ ತುಂಗಾಭದ್ರಾ ಜಲಾಶಯದ ವೈಕುಂಠ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಚಿಕೆಯಾದ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾನೂನಾತ್ಮಕ, ಆಡಳಿತಾತ್ಮಕ ಸೇರಿದಂತೆ ಎಲ್ಲ ರೀತಿಯ ಪ್ರಯತ್ನಗಳನ್ನು  ಸರಕಾರ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು‌. ನೀರಿಗೆ ಸಂಬಂಧಿಸಿದಂತೆ ಕೆಲ ಸಮಸ್ಯೆಗಳ ವ್ಯಾಜ್ಯಗಳು ಸುಪ್ರೀಂಕೋರ್ಟ್‍ನಲ್ಲಿದ್ದು, ಅವುಗಳ ತೀರ್ಪು ಬರುವವರೆಗೆ ನಾವೆಲ್ಲ ಕಾಯಬೇಕಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಿಂದೆ 5 ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಹಾಗೂ ಜಲಸಂಪನ್ಮೂಲ ವಿಷಯಕ್ಕೆ ಸಂಬಂಧಿಸಿದಂತೆ ಅಗಾಧ ಅನುಭವ ಹೊಂದಿರುವುದರಿಂದ ಎಲ್ಲ ಯೋಜನೆಗಳು ಪೂರ್ಣಗೊಳಿಸಲಿಕ್ಕೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸಮ್ಮತಿ ಪಡೆದುಕೊಂಡು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಗ್ರಾಮದ ಹತ್ತಿರ ಸಮತೋಲನ ಜಲಾಶಯ ನಿರ್ಮಿಸಲು ಯೋಜಿಸಲಾಗಿದ್ದು, ಡಿಪಿಎಆರ್ ತಯಾರಿಕೆ ಕೈಗೆತ್ತಿಕೊಳ್ಳಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮೂರು ರಾಜ್ಯಗಳ ಸಭೆ ಕರೆದು ಸಮ್ಮತಿ ಪಡೆದುಕೊಳ್ಳಲಾಗುವುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ತುಂಗಭದ್ರಾ ಜಲಾಶಯದ ಒಟ್ಟು ಸಂಗ್ರಹಣಾ ಸಾಮರ್ಥ್ಯ 132.47 ಟಿ.ಎಂ.ಸಿ ಇದ್ದು , ಪ್ರಸಕ್ತ ಹೂಳು ತುಂಬಿರುವುದರಿಂದ ಈ ಸಾಮರ್ಥ್ಯ 100.855 ಟಿ.ಎಂ.ಸಿಗೆ ಇಳಿಕೆಯಾಗಿದೆ. ಇದರಿಂದ 31.615 ಟಿಎಂಸಿ ನೀರಿನ ಕೊರತೆಯಾಗಿದ್ದು, ಇದನ್ನು ಸರಿದೂಗಿಸಲು ನವಲಿ ಬಳಿ ಸಮತೋಲನ ಜಲಾಶಯ ನಿರ್ಮಿಸುವುದಕ್ಕೆ ಯೋಜಿಸಲಾಗಿದೆ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ 16 ಟಿಎಂಸಿ ನೀರಿನ ಹಂಚಿಕೆಯಾಗಿದೆ ಎಂದು ತಿಳಿಸಿದರು.

ಈ ವಲಯದ ವ್ಯಾಪ್ತಿಯಲ್ಲಿ ಒಟ್ಟು 8 ಏತ ನೀರಾವರಿ ಯೋಜನೆಗಳಿಂದ 122 ಕೆರೆಗಳು ಮತ್ತು 2 ಜಲಾಶಯ ತುಂಬಿಸಲು 1800 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. 172210 ಎಕರೆ (700 ಹೆಕ್ಟರ್) ಬಾಧಿತ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ  ಕುಡಿಯುವ ನೀರಿನ ಸಮಸ್ಯೆ, ಅಂತರ್ಜಲ ಸಮಸ್ಯೆ, ನೀರಿನ ಸಮಸ್ಯೆ ನೀಗಲಿದೆ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದರು.

ವಿಜಯನಗರ ಅರಸರ ಕಾಲದಲ್ಲಿ ನೀರಾವರಿಗಾಗಿ ನಿರ್ಮಿಸಿರುವ ಸುಮಾರು 500 ವರ್ಷಗಳ ಹಿಂದಿನ ಅನ್‍ಲೈನ್ಡ್ 16 ಕಾಲುವೆಗಳು ಮತ್ತು 11 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಸದ್ಯಕ್ಕೆ ಪ್ಯಾಕೇಜ್-1ಅಡಿ ಕಾಲುವೆ ಮತ್ತು ಅಣೆಕಟ್ಟು ಆಧುನೀಕರಣಗೊಳಿಸಲು 371 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.  ಇನ್ನುಳಿದ 8 ಅಣೆಕಟ್ಟು 1 ಕಾಲುವೆ ಆಧನೀಕರಣವನ್ನು ಸಹ ಕೈಗೆತ್ತಿಕೊಳ್ಳಲು ರೂ.139 ಕೋಟಿಗಳಿಗೆ ಸದ್ಯದಲ್ಲೇ ಟೆಂಡರ್ ಕರೆದು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಅಣ್ಣಾಮಲೈ ಅವರು ವಿರೋಧ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವ ಕಾರಜೋಳ, ಮೇಕೆದಾಟು ಯೋಜನೆ ಜಾರಿಗೆ ಯಾರ ಅನುಮತಿಯೂ ಅಗತ್ಯವಿಲ್ಲ. ಈ ವಿಚಾರ ಸದ್ಯಕ್ಕೆ ಸುಪ್ರೀಂಕೋರ್ಟ್‍ನಲ್ಲಿರುವುದರಿಂದ ಹೆಚ್ಚಿಗೆ ಮಾತನಾಡಲಾರೆ ಎಂದರು.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆ. 21ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.  ಮುಖ್ಯಮಂತ್ರಿಗಳು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ನೀರಾವರಿ ಯೋಜನೆಗಳ ಕುರಿತು ಹೆಚ್ಚಿನ ಗಮನಹರಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT