ರಾಜ್ಯ

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಆಗಸ್ಟ್ 20 ರವರೆಗೂ ಮಳೆ ಅಬ್ಬರ

Lingaraj Badiger

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಕಾರಣ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಇಂದಿನಿಂದ ಇದೇ ಆಗಸ್ಟ್ 20ರವರೆಗೂ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. 

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದೂ ವರದಿ ಹೇಳಿದೆ.

ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

SCROLL FOR NEXT