ಡಾ. ಎಚ್. ಗಿರಿಜಮ್ಮ 
ರಾಜ್ಯ

ಖ್ಯಾತ ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಇನ್ನಿಲ್ಲ

ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿಂದು ಹೃದಯಾಘಾತದಿಂದ ನಿಧನರಾದರು. 

ದಾವಣಗೆರೆ: ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿಂದು ಹೃದಯಾಘಾತದಿಂದ ನಿಧನರಾದರು. 

ಅವರಿಗೆ 70 ವರ್ಷ ವಯಸ್ಸಾಗಿತ್ತು. ಸರಳ ಕನ್ನಡದಲ್ಲಿ ವೈದ್ಯಕೀಯ ಮಾಹಿತಿಯನ್ನು ಒದಗಿಸಬೇಕು ಎನ್ನುವ ಧ್ಯೇಯದಿಂದ ಹತ್ತಾರು ಕೃತಿಗಳನ್ನು ರಚಿಸಿದ್ದ ಡಾ.ಗಿರಿಜಮ್ಮ ವೈದ್ಯಕೀಯ ಸಾಹಿತಿಯಾಗಿ ಜನಪ್ರಿಯರಾಗಿದ್ದರು. ಬೆಂಗಳೂರಿನಲ್ಲಿ ೨೦ ವರ್ಷಗಳ ಸುದೀರ್ಘ ಅವಧಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಿದ್ದರು.

ಜನಪ್ರಿಯ ವೈದ್ಯರಾಗಿದ್ದ ಗಿರಿಜಮ್ಮ ಕೆಲ ಧಾರಾವಾಹಿ ಹಾಗೂ ಕಿರುಚಿತ್ರಗಳಲ್ಲೂ ಅಭಿನಯಿಸಿದ್ದರು. ವೈದ್ಯಕೀಯ ಕ್ಷೇತ್ರ ಮತ್ತು ವೈದ್ಯಕೀಯ ಸಾಹಿತ್ಯ ಕ್ಷೇತ್ರಕ್ಕೆ ಅವರು ಸಲ್ಲಿಸಿದ್ದ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಿತ್ತು. ಕನ್ನಡ ಸಾಹಿತ್ಯ ಪರಿಷತ್ ಕೊಡ ಮಾಡುವ ಬಿ.ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿಗೆ ಅವರು ಭಾಜನರಾಗಿದ್ದರು. ಕನ್ನಡ ಲೇಖಕಿಯರ ಸಂಘದ ಅನುಪಮಾ ಪ್ರಶಸ್ತಿ ಸೇರಿದಂತೆ ಹತ್ತಾರು ಗೌರವ ಪುರಸ್ಕಾರಗಳಿಗೆ ಗಿರಿಜಮ್ಮ ಪಾತ್ರರಾಗಿದ್ದರು.

ಪಿ ಯು ಸಿವರೆಗೆ ದಾವಣಗೆರೆಯಲ್ಲಿ ಓದಿದ್ದ ಗಿರಿಜಮ್ಮ, ನಂತರ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಂಡರು. ಗಿರಿಜಮ್ಮ ವೈದ್ಯರಾಗಬೇಕು ಎನ್ನುವುದು ಅವರ ತಾಯಿಯ ಆಸೆಯಾಗಿತ್ತು. ಕಾದಂಬರಿಗಾರ್ತಿ ತ್ರಿವೇಣಿ ಅವರ ಬರಹಗಳಿಂದ ಪ್ರೇರಣೆ ಪಡೆದು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡರು. ಅವರ ಮೊದಲ ಕತೆ ‘ಹೂಬಳ್ಳಿಗೆ ಈ ಆಸರೆ’. ಚಂದಮಾಮ, ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಸೇರಿದಂತೆ ಒಟ್ಟು 27 ಕಾದಂಬರಿಗಳನ್ನು ಬರೆದಿದ್ದಾರೆ. ಅರ್ಧಾಂಗಿ, ಸಂಜೆಮಲ್ಲಿಗೆ, ಅನಾವರಣ ಸೇರಿದಂತೆ ಹಲವು ನೀಳ್ಗತೆಗಳೂ ಸೇರಿ ಒಟ್ಟು ೫೦ ಕತೆಗಳನ್ನು ಬರೆದಿದ್ದಾರೆ. ಗಿರಿಜಮ್ಮ ಅವರ ಐದು ಕಥಾಸಂಗ್ರಹಗಳು ಪ್ರಕಟವಾಗಿವೆ.

ನಿಮ್ಮ ಮಗು, ಸ್ತ್ರೀ ದೇಹ, ಬಸಿರು, ಬಂಜೆತನ ಮತ್ತು ಪರಿಹಾರೋಪಾಯಗಳು, ಮಕ್ಕಳು ಮನಸ್ಸು ಮತ್ತು ಬೆಳವಣಿಗೆ ಗಿರಿಜಮ್ಮ ಅವರ ಜನಪ್ರಿಯ ಕೃತಿಗಳಲ್ಲಿ ಕೆಲವು. ಸುಧಾ, ಮಯೂರ ಸೇರಿದಂತೆ ಹಲವು ನಿಯತಕಾಲಿಕೆಗಳಲ್ಲಿ ಅವರ ಕಥೆ, ಲೇಖನ, ನೀಳ್ಗತೆಗಳು ಪ್ರಕಟವಾಗಿವೆ. ಗಿರಿಜಮ್ಮ ಅವರ ಅಂತ್ಯಕ್ರಿಯೆ ಇಂದು ಸಂಜೆ ನೆರವೇರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT