ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ರಸ್ತೆ ದುರಸ್ತಿಗೊಳಿಸಿ: ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ

ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಸೂಚನೆ ನೀಡಿದ್ದಾರೆ. 

ಬೆಂಗಳೂರು: ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಸೂಚನೆ ನೀಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಅವುಗಳ ದುರಸ್ತಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ ರೂ.300 ಕೋಟಿ ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಬಳಕೆ ಮಾಡಬೇಕು ಎಂದು ಹೇಳಿದರು. 

ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು. 

ರಾಜ್ಯದಲ್ಲಿನ ವಿವಿಧ ಗ್ರಾಮೀಣ ವಸತಿ ಯೋಜನೆಯಿ 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿನಗಳೊಳಗೆ ಜಿಪಿಎಸ್ ಅಪ್ಲೋಡ್ ಮತ್ತು ಆಧಾರ ಕಾರ್ಡ್ ಜೋಡಣೆ ಮಾಡಬೇಕೆಂದು ಸೂಚಿಸಿದರು.

ಜೋಡಣೆ ಕಾರ್ಯ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ನಿರ್ದೇಶನ ನೀಡಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಎಹೆಚ್ಪಿ-1.8 ಲಕ್ಷ ಮನೆಗಳು ಕಾಮಗಾರಿ ಪ್ರಾರಂಭವಾಗಿಲ್ಲ. ಈ ಯೋಜನೆಗೆ ಎಸ್'ಸಿಪಿ/ಟಿಎಸ್'ಪಿ, ಹಿಂದುಳಿದ ವರ್ಗಗಳು ಮತ್ತು ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಯ ಯೋಜನೆಯಡಿ ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. 

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡನೆ 43,361 ಮನೆ ನಿರ್ಮಾಣವಾಗುತ್ತಿದ್ದು, ಬಾಕಿ ಮನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಗೆ ಸಿದ್ಧತೆ ನಡೆಸಿಕೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪ್ರೀತಿ ಇಲ್ಲದ ಮೇಲೆ ಯಾವ ಹ್ಯಾಂಡ್ ಶೇಕ್.. ಡ್ರೆಸ್ಸಿಂಗ್ ರೂಮ್ ಕಡೆ ಭಾರತೀಯರು! ಪಾಕ್ ಆಟಗಾರರಿಗೆ ಹೆಜ್ಜೆ ಹೆಜ್ಜೆಗೂ ನಿರಾಸೆ! Video

ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್‌ಚೇರ್‌ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ

SCROLL FOR NEXT