ರಾಜ್ಯ

ಲೋಕ ಅದಾಲತ್: ಒಂದೇ ದಿನ ದಾಖಲೆಯ 3.88 ಲಕ್ಷ ಪ್ರಕರಣಗಳು ಇತ್ಯರ್ಥ

Manjula VN

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 14ರಂದು ನಡೆದ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟು 3.88 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ.

ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಷ್ಟ್ರೀಯ ದಾಖಲೆ ನಿರ್ಮಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಅವರಿಂದ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. 

ಲೋಕ ಅದಾಲತ್ ನಲ್ಲಿ 79,207 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 5,32,326 ಪ್ರಕರಣಗಳು ಸೇರಿ ಒಟ್ಟು 6,11,533 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರಿತಿಸಲಾಗಿತ್ತು. 

ರಾಜ್ಯದಾದ್ಯಂತ ಲೋಕ ಅದಾಲತ್ ನಲ್ಲಿ 943 ಪೀಠಗಳು ಕಾರ್ಯನಿರ್ವಹಿಸಿ, 33,251 ವ್ಯಾಜ್ಯ ಪೂರ್ವ ಹಾಗೂ 3,55,730 ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳು ಸೇರಿ ಒಟ್ಟು 3,88,981 ಪ್ರಕರಣಗಳನ್ನು ಇತ್ಯರ್ಥಪಡಿಸಿವೆ. ಕಕ್ಷಿದಾರರಿಗೆ ಒಟ್ಟು 907,65,59,025 ರೂಪಾಯಿ ಪರಿಹಾರ ಕೊಡಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮೆಗಾ ಲೋಕ ಅದಾಲತ್ ನಲ್ಲಿ ಸರ್ಕಾರಕ್ಕೆ ಒಟ್ಟು ರೂ.25,75,03,546 ದಂಡ ವಸೂಲಿ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

SCROLL FOR NEXT