ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು 
ರಾಜ್ಯ

ಅಗತ್ಯ ಬಿದ್ದರೆ ಸಂಸತ್‌ ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ಮತ್ತು ಜನಪ್ರತಿನಿಧಿಗಳ ವರ್ತನೆ ಬಗ್ಗೆ ತೀವ್ರ ಬೇಸರ ಮತ್ತು ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು..

ಬೆಂಗಳೂರು: ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ಮತ್ತು ಜನಪ್ರತಿನಿಧಿಗಳ ವರ್ತನೆ ಬಗ್ಗೆ ತೀವ್ರ ಬೇಸರ ಮತ್ತು ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು, ಸಂಸತ್‌ ಕಲಾಪಗಳಿಗೆ ಅಡ್ಡಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಒಕ್ಕೂಟ(ಎಫ್‌ಕೆಸಿಸಿಐ) ಆಯೋಜಿಸಿದ್ದ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ನಾಯ್ಡು, "ಕಲಾಪಕ್ಕೆ ಅಡ್ಡಿ ಎಂದರೆ ನೀವು ದೇಶದ ಕಾರಣಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ಅರ್ಥವೇ? 
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಉತ್ತಮ ಚರ್ಚೆಗಳು ನಡೆಯಬೇಕು. ಚರ್ಚೆ ಉದ್ವಿಗ್ನತೆ ಇರುತ್ತದೆ, ಆದರೆ ಜನರು ಅವುಗಳನ್ನು ಗಮನಿಸಿದಂತೆ ಸದಸ್ಯರು ನಡೆದುಕೊಳ್ಳಬೇಕು ಎಂದರು.


"ನಾನು ಕ್ರಮ ತೆಗೆದುಕೊಳ್ಳಲು ಹೆದರುತ್ತೇನೆ ಎಂದಲ್ಲ. ನಾನು ಕ್ರಮ ತೆಗೆದುಕೊಳ್ಳಬಹುದು ಮತ್ತು ಅಗತ್ಯವಿದ್ದರೆ ನಾನು ಕ್ರಮ ತೆಗೆದುಕೊಳ್ಳುತ್ತೇನೆ. ಆದರೆ, ಇಂತಹ ವಿಷಯಗಳನ್ನು ದೂರದರ್ಶನದಲ್ಲಿ ನೋಡಿದಾಗ ಜನರು ದುಃಖಿತರಾಗುತ್ತಾರೆ. ಇದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು”ಎಂದು ರಾಜ್ಯಸಭೆಯಲ್ಲಿನ ಇತ್ತೀಚಿನ ಗದ್ದಲವನ್ನು ಉಲ್ಲೇಖಿಸಿ ಹೇಳಿದರು.


ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕೇಂದ್ರ ಸಚಿವರು ಪ್ರತಿಪಕ್ಷ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರೆ, ಸಂಸತ್ತಿನ ಮೇಲ್ಮನೆಯಲ್ಲಿ ಗದ್ದಲಕ್ಕೆ ಪ್ರತಿಪಕ್ಷಗಳು ಸರ್ಕಾರವನ್ನು ದೂಷಿಸಿವೆ. 
ಚುನಾಯಿತ ಪ್ರತಿನಿಧಿಗಳು ಮತ್ತು ಉನ್ನತ ಹುದ್ದೆಗಳನ್ನು ಹೊಂದಿರುವವರು ಜನರ ಜೀವನ ಮಟ್ಟವನ್ನು ಸುಧಾರಿಸಲು ನಿರಂತರವಾಗಿ ಪ್ರಯತ್ನಿಸಬೇಕು ಮತ್ತು ಅವರ ಕಾರ್ಯಕ್ಷಮತೆಯನ್ನು ಸುಧಾರಿಸಲು ಪ್ರಯತ್ನಿಸಬೇಕು ಎಂದು ಉಪ ರಾಷ್ಟ್ರಪತಿ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT