ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದು 
ರಾಜ್ಯ

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ: ಕೇಸ್ ದಾಖಲು

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಇದೀಗ ಈ ಘಟನೆ ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಇದೀಗ ಈ ಘಟನೆ ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರೀ ವೈರಲ್ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೇಂದ್ರ ಸಚಿವ ಭಗವಂತ ಖೂಬಾಗೆ ಬಿಜೆಪಿಯಿಂದ ಸ್ವಾಗತ ಕೋರಲಾಗಿತ್ತು.  ಈ ವೇಳೆ ಅವರ ಬೆಂಬಲಿಗರೇ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸಲು ನಾಡ ಬಂದೂಕು ವ್ಯವಸ್ಥೆಯನ್ನು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಬಾಬುರಾವ್ ಚಿಂಚನಸೂರ್ ಜನಾಶೀರ್ವಾದ ಯಾತ್ರೆಗೆ ಗೈರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್