ರಾಜ್ಯ

ವಿದ್ಯುತ್ ಪ್ರವಹಿಸಿ ತುಮಕೂರಿನ ವಿದ್ಯಾರ್ಥಿ ಸಾವು: ಪೋಷಕರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Sumana Upadhyaya

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ದಿನ ಧ್ವಜ ಕಂಬ ನೆಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕನ ಪೋಷಕರಿಗೆ ಪರಿಹಾರ ನೀಡುವ ಬಗ್ಗೆ ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರು ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮತ್ತು ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪವನ್ ಮತ್ತು ಶಶಾಂಕ್ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತನಿಖೆಗೆ ಆದೇಶ ನೀಡಿದ್ದರು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ.  ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿರುವುದಾಗಿ ಸಚಿವರು ಹೇಳಿದ್ದರು.

SCROLL FOR NEXT