ರಾಜ್ಯ

ದಿ. ದೇವರಾಜ ಅರಸು ಹೆಸರಿನಲ್ಲಿ ವರ್ಷವಿಡೀ ಕಾರ್ಯಕ್ರಮ, ಹಿಂದುಳಿದ ವರ್ಗದವರಿಗೆ ಸಮರ್ಪಣೆ: ಸಿಎಂ ಬಸವರಾಜ ಬೊಮ್ಮಾಯಿ

Sumana Upadhyaya

ಬೆಂಗಳೂರು: ಕನ್ನಡ ನಾಡು ಕಂಡ ಧೀಮಂತ ನಾಯಕ ದಿವಂಗತ ದೇವರಾಜ ಅರಸು ಅವರು. ರೈತಪರ, ಜನಪರ, ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಅವರ 106ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಅವರ ಜನ್ಮದಿನ ಆಚರಣೆ ಹೆಸರಿನಲ್ಲಿ ನಮ್ಮ ಕರ್ತವ್ಯಗಳನ್ನು ನೆನಪು ಮಾಡಿಕೊಳ್ಳುವ ದಿನ ಇಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸರ್ಕಾರ ವತಿಯಿಂದ ದಿ ದೇವರಾಜ ಅರಸುರವರ ಜಯಂತಿಯನ್ನು ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬದ್ಧತೆಯನ್ನು ತೋರಿಸಿಕೊಳ್ಳುವ ದಿನ ಇಂದು. ಹಿಂದುಳಿದ ವರ್ಗಗಳ ಸ್ವಾಭಿಮಾನ ಬದುಕಿಗೆ, ಅವರ ಏಳಿಗೆಗೆ ಸರ್ಕಾರ ಹಲವು ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸಲು ಹೆಚ್ಚಿನ ಪ್ರಾಶಸ್ತ್ಯ ನೀಡಲು ಈ ದಿನ ಸಂಕಲ್ಪ ಮಾಡುತ್ತಿದ್ದೇವೆ ಎಂದರು.

ದೇವರಾಜ ಅರಸು ಅವರ ಕ್ರಾಂತಿಕಾರಿ ಭೂಸುಧಾರಣಾ ಕಾಯ್ದೆ ನಮಗೆಲ್ಲರಿಗೂ ಅತ್ಯಂತ ಸ್ಪೂರ್ತಿದಾಯಕ, ಇಂದು ಕರ್ನಾಟಕದಲ್ಲಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಘೋಷಣೆಯನ್ನು ಅಕ್ಷರಶಃ ಪಾಲಿಸಿದ ಮುಖ್ಯಮಂತ್ರಿ ದೇವರಾಜ ಅರಸುರವರು. ಅರಸುರವರು ಅನೇಕ ನಾಯಕರನ್ನು ಹುಟ್ಟಿಹಾಕಿ ಬೆಳೆಸಿದ್ದಾರೆ. ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಮಹತ್ವದ ಪಾತ್ರ ಅವರದ್ದು, ಅವರು ಹಾಕಿಕೊಟ್ಟ ಹೆಜ್ಜೆ ಗುರುತುಗಳು ಇನ್ನೂ ಕೂಡ ಶಾಶ್ವತವಾಗಿ ರಾಜ್ಯ ರಾಜಕೀಯದಲ್ಲಿದೆ.ಅವರ ಹೆಸರಿನಲ್ಲಿ ಇಂದು ಮತ್ತು ವರ್ಷವಿಡೀ ಕಾರ್ಯಕ್ರಮವನ್ನು ವಿಶೇಷವಾಗಿ ಹಿಂದುಳಿದ ವರ್ಗಕ್ಕೆ ಸಮರ್ಪಣೆ ಮಾಡಿ ಮಾಡುತ್ತೇವೆ ಎಂದು ಘೋಷಿಸಿದರು.

SCROLL FOR NEXT