ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ

ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ.

ಸಾಂದರ್ಭಿಕ ಚಿತ್ರ
Nagaraja AB
Updated On : 20 Aug 2021, 11:47 am

ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ. 

ಮೃತ ನಿತೇಶ್​ ಹಾಗೂ ಆತನ ಸ್ನೇಹಿತ ಪ್ರಶಾಂತ್ ತಡರಾತ್ರಿಯವರೆಗೂ​ ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆ ಆರಂಭವಾಗಿದ್ದು, ಕೊನೆಗೆ ಜಗಳ ತಾರಕಕ್ಕೇರಿ ಪ್ರಶಾಂತ್ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ. ಸ್ವಲ್ಪ ಹೊತ್ತಿನ ಬಳಿಕ ಇಬ್ಬರೂ ಸುಮ್ಮನಾಗಿ ಮಲಗಿದ್ದರು. ಮಲಗಿ ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಪ್ರಶಾಂತ್ ಕೋಪದಿಂದ್ದ ಮತ್ತೆ ಎಚ್ಚರಗೊಂಡಿದ್ದಾನೆ. ನಂತರ ನಿತೇಶ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ. 

Advertisement

Advertisement

ಸ್ಥಳಕ್ಕೆ ಡಿ.ಜೆ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗುತಿದ್ದ ಪ್ರಶಾಂತ್, ಪಪ್ಪಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments