ಚಾಕು 
ರಾಜ್ಯ

ಬೆಂಗಳೂರು: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಆಕ್ಷೇಪಿಸಿದ ಮೆಕ್ಯಾನಿಕ್‍ನನ್ನು ಇರಿದು ಕೊಂದ ಸಹೋದರರು!

ತನ್ನ ಪತ್ನಿಯನ್ನು ಚುಡಾಯಿಸದಂತೆ ಯುವಕರಿಗೆ ಎಚ್ಚರಿಕೆ ನೀಡಿದ ಕಾರ್ ಮೆಕ್ಯಾನಿಕ್ ನನ್ನು ಸಹೋದರರಿಬ್ಬರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ತನ್ನ ಪತ್ನಿಯನ್ನು ಚುಡಾಯಿಸದಂತೆ ಯುವಕರಿಗೆ ಎಚ್ಚರಿಕೆ ನೀಡಿದ ಕಾರ್ ಮೆಕ್ಯಾನಿಕ್ ನನ್ನು ಸಹೋದರರಿಬ್ಬರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು 40 ವರ್ಷದ ಫಾಜಿಲ್ ಪಾಷಾ ಎಂದು ಗುರುತಿಸಲಾಗಿದ್ದು ಕೊಲೆ ಪ್ರಕರಣ ಸಂಬಂಧ ಪೊಲೀಸರು ಸುಮಾರು 20 ವರ್ಷದ ಅರ್ಬಾಜ್ ಪಾಷಾ ಮತ್ತು ಆತನ ಸಹೋದರ 16 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ. 

ಪಾದರಾಯನಪುರದಲ್ಲಿ ಮೃತ ಫಾಜಿಲ್ ಪಾಷಾ ಮತ್ತು ಆರೋಪಿಗಳು ನೆರೆಹೊರೆಯಾಗಿದ್ದರು. ಫಾಜಿಲ್ ಹಂಪಿನಗರದ ಆರ್ ಪಿ ರಸ್ತೆಯ ಕಾರ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದು ಅರ್ಬಾಜ್ ಔಷಧ ವಿತರಣೆ ಕೆಲಸ ಮಾಡುತ್ತಿದ್ದ.

ಅರ್ಬಾಜ್ ಫಾಜಿಲ್ ಪತ್ನಿಯನ್ನು ಚುಡಾಯಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಅರ್ಜಾಬ್ ಗೆ ಎಚ್ಚರಿಕೆ ನೀಡಲಾಗಿತ್ತು. ಇದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು. 

ಸೋಮವಾರ ಬೆಳಗ್ಗೆ 10.15ರ ಸುಮಾರಿಗೆ, ಅರ್ಬಾಜ್ ಮತ್ತು ಆತನ ಸಹೋದರ ಗ್ಯಾರೇಜ್‌ಗೆ ಹೋಗಿ ಫಾಜಿಲ್‌ಗೆ ಹಲವು ಬಾರಿ ಇರಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಫಾಜಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಫಾಜಿಲ್ ಮೃತಪಟ್ಟಿದ್ದರು. ಈ ಸಂಬಂಧ ಅರ್ಬಾಜ್ ಮತ್ತು ಆತನ ಸಹೋದರನನ್ನು ಬಂಧಿಸಲಾಗಿದ್ದು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT