ರಾಜ್ಯ

ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಲೈನ್ ಗೆ ಆಗಸ್ಟ್ 29 ರಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಿಂದ ಚಾಲನೆ

Lingaraj Badiger

ಬೆಂಗಳೂರು: ಬಹು ನಿರೀಕ್ಷಿತ ನಮ್ಮ ಮೆಟ್ರೋದ ಮೈಸೂರು ರಸ್ತೆ - ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಿದ್ದಾರೆ. 

ಆಗಸ್ಟ್ 29 ರಂದು ಭಾನುವಾರ ಮಧ್ಯಾಹ್ನ 12ಕ್ಕೆ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಮೈಸೂರು ರಸ್ತೆ-ಕೆಂಗೇರಿ ಮೆಟ್ರೋಗೆ ಚಾಲನೆ ನೀಡಲಿದ್ದಾರೆ ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ತಿಳಿಸಿದ್ದಾರೆ.

ಈಗಾಗಲೇ ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗವನ್ನು ಪರಿಶೀಲನೆ ನಡೆಸಿ, ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ.

ಮೈಸೂರು ರಸ್ತೆ-ಕೆಂಗೇರಿ ತನಕ ಮೆಟ್ರೋ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ. ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರ ನಡೆಸುವುದರಿಂದ 75 ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್. ಆರ್. ನಗರ ಸೇರಿದಂತೆ ಸುತ್ತಮತ್ತಲಿನ ಬಡಾವಣೆಗಳ ಜನರಿಗೆ ಮೆಟ್ರೋ ಸಂಪರ್ಕ ಸಿಗಲಿದೆ.

ಈ ವಿಸ್ತರಿತ ನೇರಳೆ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಬರುತ್ತವೆ.

SCROLL FOR NEXT