ರಾಜ್ಯ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ, ಯುವಕರಿಗೆ ಉದ್ಯೋಗ ಸೃಷ್ಟಿ: ಸಿಎಂ ಬಸವರಾಜ ಬೊಮ್ಮಾಯಿ

Sumana Upadhyaya

ಬೆಂಗಳೂರು: ಹಿಂದುಳಿದ ವರ್ಗಗಳ ಸಶಕ್ತೀಕರಣಕ್ಕೆ ರಾಜ್ಯ ಸರ್ಕಾರ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸಲು ವಿಶೇಷ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ ದೇವರಾಜ ಅರಸು ಅವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್ ಸಿ, ಎಸ್ ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳಿಗೆ ಸಾಕಷ್ಟು ವಸತಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಹೂಡಿಕೆ ಮಾಡಲಿದೆ. ಇಂತಹ ಶಾಲೆಗಳನ್ನು ಗುಣಮಟ್ಟದಲ್ಲಿ ಮೇಲ್ದರ್ಜೆಗೇರಿಸಿ ಮಕ್ಕಳಿಗೆ ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣವನ್ನು ಕಲ್ಪಿಸುವಂತಹ ವಾತಾವರಣವನ್ನು ಮತ್ತು ಅವಕಾಶವನ್ನು ಇಂದಿನ ಮಕ್ಕಳಿಗೆ ನೀಡಬೇಕಾಗಿದೆ ಎಂದರು.

ಸಮಾಜದ ಬೆಳವಣಿಗೆಗೆ ಯುವ ಜನತೆಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯವಾಗಿರುತ್ತದೆ. ಹಿಂದುಳಿದ ವರ್ಗಗಳ ಮಕ್ಕಳು ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ತೆಗೆದುಕೊಂಡು ಸರ್ಕಾರಿ ವಲಯಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹೊಸ ಕೈಗಾರಿಗಳನ್ನು ಸ್ಥಾಪಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಹೇಳಿದರು.

ಪ್ರಸಕ್ತ ವರ್ಷದಲ್ಲಿ ತಲಾ 6 ಕೋಟಿ ರೂಪಾಯಿ ಅನುದಾನದಂತೆ ಸರ್ಕಾರ ಮೂರು ವಸತಿ ಶಾಲೆಗಳನ್ನು ಅಲೆಮಾರಿ ಸಮುದಾಯದವರಿಗೆ ಪ್ರಾರಂಭಿಸಲಿದೆ. ರಾಜ್ಯದಲ್ಲಿ ಪ್ರಸ್ತುತ ಅಂತಹ ನಾಲ್ಕು ಶಾಲೆಗಳಿದ್ದು ಅವರ ಅಭಿವೃದ್ಧಿಗೆ ಮಂಡಳಿಯಿದೆ. ಸರ್ಕಾರ, ಅಲೆಮಾರಿ ಸಮುದಾಯದ ಕಲೆ, ಸಂಸ್ಕೃತಿ ಮತ್ತು ಜೀವನಕ್ರಮಗಳನ್ನು ರಕ್ಷಿಸಲು ಮುಂದಾಗಿದೆ ಎಂದರು.

ಪ್ರಧಾನ ಮಂತ್ರಿಯವರು ಹಿಂದುಳಿದ ವರ್ಗಗಳ 30 ಸಚಿವರನ್ನು ಸಂಪುಟಕ್ಕೆ ಸೇರಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿದ್ದಾರೆ, ನೀಟ್‌ನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಿದ್ದಾರೆ ಜೊತೆಗೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ನಿರ್ಧರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಸಿಎಂ ಬೊಮ್ಮಾಯಿ ಅವರು ಸುಮಂಗಲಿ ಸೇವಾಶ್ರಮದ ಬಸವ ಪ್ರಭು ಎಲ್ ಪಾಟೀಲ್, ಭಾಸ್ಕರ್ ದಾಸ್ ಮತ್ತು ಸುಶೀಲಮ್ಮ ಅವರಿಗೆ ಡಿ ದೇವರಾಜ್ ಅರಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

SCROLL FOR NEXT