ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,189 ಪ್ರಕರಣ ಪತ್ತೆ, 22 ಸಾವು; ಬೆಂಗಳೂರನ್ನು ಹಿಂದಿಕ್ಕಿದ ದಕ್ಷಿಣ ಕನ್ನಡ!

ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,189 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,189 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,145ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 267 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,35,036ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲಿ 286 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಇಂದು 1,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,80,889ಕ್ಕೆ ಏರಿಕೆಯಾಗಿದೆ. ಇನ್ನು 20,556 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,25,158 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,189 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.94ಕ್ಕೆ ಇಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ನನಗಿದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿರುವೆ: ಡಿ.ಕೆ.ಶಿವಕುಮಾರ್

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

SCROLL FOR NEXT