ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ವೀಸಾ ವಿಸ್ತರಣೆ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಅಫ್ಘನ್ ವಿದ್ಯಾರ್ಥಿಗಳ ಮನವಿ

ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ರಾಷ್ಟ್ರದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತದ ಪರಿಸ್ಥಿತಿಯಲ್ಲಿ ರಾಷ್ಟ್ರಕ್ಕೆ ಹಿಂತಿರುಗುವುದು ಅಸಾಧ್ಯವಾಗಿದ್ದು, ವೀಸಾ ವಿಸ್ತರಣೆ ಮಾಡಿ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಮಂಗಳೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಮಂಗಳೂರು: ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ರಾಷ್ಟ್ರದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತದ ಪರಿಸ್ಥಿತಿಯಲ್ಲಿ ರಾಷ್ಟ್ರಕ್ಕೆ ಹಿಂತಿರುಗುವುದು ಅಸಾಧ್ಯವಾಗಿದ್ದು, ವೀಸಾ ವಿಸ್ತರಣೆ ಮಾಡಿ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಮಂಗಳೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಮಂಗಳೂರು ವಿವಿ, ಸುರತ್ಕಲ್ ಎನ್ ಐಟಿಕೆ ಕಾಲೇಜು ಮತ್ತು ಅಲೋಶಿಯಸ್ ಕಾಲೇಜಿನ ಸುಮಾರು 50 ವಿದ್ಯಾರ್ಥಿಗಳು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿ ಮಾಡಿದರು. 

ಮಂಗಳೂರಿನಲ್ಲಿ ಅಧ್ಯಯನ ನಡೆಸುತ್ತಿರುವ ಕೆಲವು ವಿದ್ಯಾರ್ಥಿಗಳ ವೀಸಾ ಅವಧಿ ಸೆಪ್ಟೆಂಬರ್ ನಲ್ಲಿ ಕೊನೆಗೊಳ್ಳುತ್ತಿದೆ. ಅದನ್ನು ವಿಸ್ತರಣೆ ಮಾಡುವಂತೆ ಮನವಿ ಮಾಡಿಕೊಂಡರು.

ಅಫ್ಘಾನ್ ವಿದ್ಯಾರ್ಥಿಗಳ ಒಕ್ಕೂಟದ ಪ್ರಮುಖರಾದ ನಾಸಿರ್ ಅಹ್ಮದ್ ಮಾತನಾಡಿ, ಮಂಗಳೂರಿನಲ್ಲಿರುವ ಅಫ್ಘಾನ್ ವಿದ್ಯಾರ್ಥಿಗಳ ಬಗ್ಗೆ ಪೊಲೀಸ್ ಕಮಿಷನರ್ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ. 

ಕಳೆದ ಸುಮಾರು 15 ವರ್ಷಗಳಿಂದ ಅಫ್ಘಾನ್'ನ ಹಲವಾರು ವಿದ್ಯಾರ್ಥಿಗಳು ಮಂಗಳೂರು ನಗರಕ್ಕೆ ಉನ್ನತ ವ್ಯಾಸಾಂಗಕ್ಕಾಗಿ ಆಗಮಿಸುತ್ತಿದ್ದಾರೆ. ಭಾರತದ ಬಗ್ಗೆ ಅಫ್ಘಾನ್ ವಿದ್ಯಾರ್ಥಿಗಳು ಹಾಗೂ ಕುಟುಂಬದವರಿಗೆ ಅಪಾರವಾದ ಗೌರವವಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೇಂದ್ರ ಸರ್ಕಾರವೂ ಸಾಕಷ್ಟು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದೆ. ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದಾಗಿ ಅಲ್ಲಿರುವ ತಮ್ಮ ಕುಟುಂಬಗಳ ಬಗ್ಗೆ ಆತಂಕಿತರಾಗಿದ್ದೇವೆ. ಪೊಲೀಸರು ಇಲಾಖೆಯಿಂದ ನಮಗೆ ಸುರಕ್ಷತೆಯ ಭರವಸೆ ದೊರಕಿದೆ ಎಂದು ತಿಳಿಸಿದರು. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಶಿಕುಮಾರ್ ಅವರು,  ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು, ಸೆಪ್ಟಂಬರ್ ತಿಂಗಳಲ್ಲಿ ವೀಸಾ ಅವಧಿ ಮುಗಿದವರಿಗೆ ಆರು ತಿಂಗಳಿಗೆ ವಿಸ್ತರಣೆ ಮಾಡಲಾಗುವುದು. 58 ಮಂದಿಯ ಪೈಕಿ 11 ಜನ ಅಫ್ಘಾನಿಸ್ತಾನಕ್ಕೆ ತೆರಳಿದ್ದು, ಅವರು ತಮ್ಮ ವ್ಯಾಸಂಗ ಮುಂದುವರಿಸಲು ಬಯಸಿದರೆ ಭಾರತ ಸರ್ಕಾರ ಅವಕಾಶ ನೀಡಲಿದೆ. ಯಾರಾದರೂ ತಮ್ಮ ದೇಶಕ್ಕೆ ತೆರಳಿ ಕುಟುಂಬಸ್ಥರ ಜೊತೆಗಿರಬೇಕು ಎಂದು ಬಯಸಿದರೆ ಅದಕ್ಕೂ ಅವಕಾಶ ನೀಡಲಾಗುವುದು. ಇಲ್ಲಿಯೇ ಉಳಿದುಕೊಳ್ಳಲು ಬಯಸಿದರೆ ರೆಫ್ಯುಜಿ ಸ್ಟೇಟಸ್ (ನಿರಾಶ್ರಿತರು) ಅಡಿ ಉಳಿಸಲಾಗುವುದು. ಅಲ್ಲದೆ, ಅಫ್ಘನ್ ಸ್ಥಿತಿ ಸುಧಾರಣೆ ಆಗೋವರೆಗೆ ಇಲ್ಲಿ ಕೆಲಸ ಮಾಡಲು ಬಯಸಿದರೆ ಅದಕ್ಕೂ ಅವಕಾಶ ನೀಡಲಾಗುತ್ತದೆ. ಪ್ರಸ್ತುತ ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಿದ್ದು, ಎಡಿಜಿಪಿ ಉಮೇಶ್ ಕುಮಾರ್ ಅವರಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT