ರಾಜ್ಯ

ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಬಿಬಿಎಂಪಿಯಿಂದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ

ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಪಡಿಸಿಕೊಳ್ಳಲಾಗಿದ್ದ ಜಾಗವನ್ನು ಬಿಬಿಎಂಪಿ ತೆರವುಗೊಳಿಸಿ, ತನ್ನ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು: ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಪಡಿಸಿಕೊಳ್ಳಲಾಗಿದ್ದ ಜಾಗವನ್ನು ಬಿಬಿಎಂಪಿ ತೆರವುಗೊಳಿಸಿ, ತನ್ನ ವಶಕ್ಕೆ ಪಡೆದುಕೊಂಡಿದೆ. ಶನಿವಾರ ತೆರವು ಕಾರ್ಯಾಚರಣೆ ನಡೆಸಿದ್ದ ಬಿಬಿಎಂಪಿ ಅಧಿಕಾರಿಗಳು 36 ಗುಂಟೆ ಭೂಪ್ರದೇಶವನ್ನು ತೆರವುಗೊಳಿಸಿರುವುದಾಗಿ ತಿಳಿದುಬಂದಿದೆ. ಯಲಹಂಕ ವಲಯಕ್ಕೆ ಸೇರುವ ದೊಡ್ಡಬೊಮ್ಮಸಂದ್ರ ಕೆರೆಯ ವಿಸ್ತೀರ್ಣ 124 ಎಕರೆಯಾಗಿದೆ.

ತೆರವು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಭೂಮಿಯಲ್ಲಿ 12 ಗುಂಟೆ ಭೂಮಿಯನ್ನು ಉದ್ಯಾನವನ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರು ನಗರ ಡೆಪ್ಯುಟಿ ಕಮೀಷನರ್ ಕಚೇರಿ ಬೆಂಗಳೂರು ಉತ್ತರ, ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಯಲಹಂಕದಲ್ಲಿ ಒಟ್ಟು 12 ಕೆರೆ ಪ್ರದೇಶಗಳಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದ  18 ಎಕರೆ 28 ಗುಂಟೆ ಭೂಪ್ರದೇಶವನ್ನು ತೆರವುಗೊಳಿಸಿ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. ಯಲಹಂಕ ವಲಯದಲ್ಲಿನ 1.20 ಎಕರೆ ಗೋಮಾಳ ಪ್ರದೇಶವನ್ನೂ ಇದೇ ಸಂದರ್ಭದಲ್ಲಿ ವಶಪಡಿಸಿಕೊಂಡಿದೆ.

ಕರ್ನಾಟಕ ಉಚ್ಛನ್ಯಾಯಾಲಯ ಮತ್ತು ಲೋಕಾಯುಕ್ತ ನಿರ್ದೇಶನದ ಮೇರೆಗೆ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT