ರಾಜ್ಯ

ಸೋಮವಾರದಿಂದ ಶಾಲೆಗಳ ಆರಂಭ: ಕೆಲ ಶಾಲೆಗಳಿಗೆ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಭೇಟಿ

Manjula VN

ಬೆಂಗಳೂರು: ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಕೊರೊನಾ ಮೂರನೇ ಅಲೆ ಆತಂಕದ ನಡೆವಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿ  9ನೇ ತರಗತಿಯಿಂದ 12ನೇ ತರಗತಿವರೆಗೆ ಆರಂಭವಾಗಲಿದೆ. 

ಶಾಲೆಗಳ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾನೂ ಶಾಲೆಗೆ ಹೋಗುತ್ತೇನೆಂದು ಹೇಳುವ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿರುವ ಆತಂಕವನ್ನು ಹೋಗಲಾಡಿಸುವ ಪ್ರಯತ್ನವನ್ನು ಮಾಡಿದ್ದಾರೆ. 

ಶಾಲೆಗಳ ಆರಂಭ ಕುರಿತು ನಾವು ಎಷ್ಟು ಗಂಭೀರವಾಗಿದ್ದೇವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಹೀಗಾಗಿ ಸ್ವತಃ ಮುಖ್ಯಮಂತ್ರಿಗಳೇ ಶಾಲೆಗಳಿಗೆ ಭೇಟಿ ನೀುಡತ್ತಿದ್ದಾರೆಂದು ಶಿಕ್ಷಣ ಸಚಿವ ನಾಗೇಶ್ ಅವರು ಹೇಳಿದ್ದಾರೆ. 

ಈ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಲೆಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. 

ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಇತರೆ ಬೋದಕೇತರ ಸಿಬ್ಬಂದಿಗಳಿಗೆ ಲಸಿಕೆಗಳನ್ನು ನೀಡಲಾಗಿದೆ. ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಬ್ಯಾಚ್ ಗಳಂತೆ ತರಗತಿಗಳನ್ನು ನಡೆಸಲಾಗುತ್ತದೆ. ಪೋಷಕರೂ ಕೂಡ ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನ ಹರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

SCROLL FOR NEXT