ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ತರಗತಿಗಳು ಪುನಾರಂಭ: ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಚಿವರಿಗೆ ಸಿಎಂ ಸೂಚನೆ

ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು  ಪ್ರಾರಂಭವಾಗುತ್ತಿವೆ. 

ಬೆಂಗಳೂರು: ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು  ಪ್ರಾರಂಭವಾಗುತ್ತಿವೆ. 

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಸೂಚನೆ ನೀಡಿದ್ದು "ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ.  ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ" ಎಂಬ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ‌ ಎಂದು ತಿಳಿಸಿದ್ದಾರೆ.‌

ಸಚಿವರು ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು. ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ  ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.

ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT