ಶತಾಯುಷಿ ಗುರುವ ಕೊರಗ ನಿಧನ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಡೋಲು ಕಲಾವಿದ, ಶತಾಯುಷಿ ಗುರುವ ಕೊರಗ ನಿಧನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ.  ಅವರಿಗೆ 105 ವರ್ಷ ವಯಸ್ಸಾಗಿತ್ತು.

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ.  ಅವರಿಗೆ 105 ವರ್ಷ ವಯಸ್ಸಾಗಿತ್ತು.

ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಇಡೀ ದೇಶಕ್ಕೇ ಪರಿಚಯಿಸಿರುವ ಶತಾಯುಷಿ ಡೋಲು (ಕಡ್ಡಾಯಿ) ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ 105 ವರ್ಷ ವಯಸ್ಸಿನ ಗುರುವ ಕೊರಗ ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ಡೋಲು ಕಲಾವಿದ ಹಿರಿಯಡ್ಕದ ತೋಮ ಮತ್ತು ತುಂಬೆ ದಂಪತಿ ಪುತ್ರರಾಗಿರುವ ಇವರು, 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.

ತುಳುನಾಡಿನ ಜಾನಪದ ಸಂಸ್ಕೃತಿಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಅವರು ಮಾಡಿದ್ದಾರೆ. ಶತಾಷಿಯಾದರೂ ಇವರ ಡೋಲು ಭಾರಿಸುವ ಉತ್ಸಾಹ ಕುಂದಿರಲಿಲ್ಲ. ಹಿರಿಯಡ್ಕ, ಕಣಜಾರು ಜಾತ್ರೆ, ಗರಡಿ ಉತ್ಸವ, ಕೋಲ ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ನಡೆಯುವ ಕಂಬಳಗಳಿಗೆ ಗುರುವರ ಡೋಲು ಬಡಿತ ವ್ಯಾಪಕ ಖ್ಯಾತಿಗಳಿಸಿತ್ತು.

ಇವರ ಸಾಧನೆಯನ್ನು ಗುರುತಿಸಿ 2017ನೆ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಹಲವು ಗೌರವ ಪುರಸ್ಕಾರಕ್ಕೆ ಅವರು ಭಾಜನರಾಗಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT