ರಾಜ್ಯ

ಇಂದಿನಿಂದ 9-12ನೇ ತರಗತಿಗಳ ಆರಂಭ: ಸರ್ಕಾರದ ನಿರ್ಧಾರಕ್ಕೆ ಶೇ.75ರಷ್ಟು ಪೋಷಕರ ಬೇಸರ!

Manjula VN

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ 26 ಜಿಲ್ಲೆಗಳಲ್ಲಿ ಸೋಮವಾರದಿಂದ 9-12ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕೆ ತರಗತಿಗಳು ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿಗಳನ್ನು ಆರಂಭ ಮಾಡಲಾಗಿದೆ. 

ಆದರೆ, ಕೋವಿಡ್ ಸೋಂಕು ತಗಲುವ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಶೇ.75ರಷ್ಟು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕರ್ನಾಟಕದ ಸ್ವತಂತ್ರ ಸಿಬಿಎಸ್‌ಇ ಶಾಲೆಗಳ ಮ್ಯಾನೇಜ್ಮೆಂಟ್ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ತಿಳಿದುಬಂದಿದೆ. 

ಸಮೀಕ್ಷೆಯಲ್ಲಿ 9ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳ ಶೇ.75ರಷ್ಟು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ. 

ಇದಕ್ಕೆ ಕೋವಿಡ್ ಸೋಂಕು ತಗುಲುವ ಆತಂಕ ಕಾರಣವೆಂದು ಹೇಳಲಾಗುತ್ತಿದೆ. ಸಮೀಕ್ಷೆಯಲ್ಲಿ ಉಳಿದ ಶೇ.25 ರಷ್ಟು ಪೋಷಕರು ಭೌತಿಕ ತರಗತಿಗಳ ಪರವಾಗಿದ್ದಾರೆ. 

ಆಫ್‌ಲೈನ್ ತರಗತಿಗಳು ವಿದ್ಯಾರ್ಥಿಗಳ ಸಾಮಾಜಿಕ ಸಂವಹನವನ್ನು ಸುಧಾರಿಸುವುದರ ಜೊತೆಗೆ, ಆನ್‌ಲೈನ್‌ಗಿಂತ ಉತ್ತಮ ಕಲಿಕೆಯನ್ನು ಖಾತ್ರಿಪಡಿಸಬಹುದು ಎಂದು ಹೇಳಿದ್ದಾರೆದು ತಿಳಿದುಬಂದಿದೆ. 

ರಾಜ್ಯದ 26 ಜಿಲ್ಲೆಗಳಲ್ಲಿ ಸುಮಾರು 16 ಸಾವಿರ ಪ್ರೌಢಶಾಲೆ, 5000ಕ್ಕೂ ಹೆಚ್ಚು ಪಿಯು ಕಾಲೇಜುಗಳ 9ರಿಂದ 12ನೇ ತರಗತಿಗೆ ಈಗಾಗಲೇ ದಾಖಲಾತಿ ಪಡೆದಿರುವ ಸುಮಾರು 25 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ನಾಲ್ಕೂವರೆ ತಿಂಗಳ ಬಳಿಕ ಪುನಾರಂಭವಾಗಲಿವೆ.ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಆರಂಬಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. 

ಈ ನಡುವೆ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಭಾನುವಾರ ಶೇ.2ಕ್ಕಿಂತ ಕೆಳಕ್ಕೆ ಕುಸಿದಿದೆಯಾದರೂ, ಅಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಅನುಮತಿ ನೀಡಿಲ್ಲ. ಸರ್ಕಾರದ ಆದೇಶದಂತೆ ಎಲ್ಲಾ ಶಾಲೆ, ಪಿಯು ಕಾಲೇಜುಗಳಲ್ಲೂ ಭೌತಿಕ ತರಗತಿ ಆರಂಭಕ್ಕೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಅನುಸರಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 

SCROLL FOR NEXT