ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಪಿಸ್ತೂಲು ಸ್ವಚ್ಛಗೊಳಿಸುವ ವೇಳೆ ಮಿಸ್ ಫೈರ್; ಕಾನ್ ಸ್ಟೇಬಲ್ ಸಾವು

ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ.

ಚೇತನ್ (28) ಸಾವನ್ನಪ್ಪಿದ ಪೊಲೀಸ್ ಕಾನ್‌ಸ್ಟೇಬಲ್. ಬೆಳಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಫೈರಿಂಗ್‌ ಆಗಿ ಗುಂಡು ತಗುಲಿದೆ. ಘಟನೆ ಬಳಿಕ ತುರ್ತಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಚೇತನ್‌ ಅವರನ್ನು ಸಾಗಿಸಲಾಯಿತು.

ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ಚೇತನ್‌ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದ ಚೇತನ್, 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ಪೂರ್ವ ವಲಯ ಐಜಿಪಿ ಎಸ್ ರವಿ ಹಾಗೂ ಎಸ್‌ಪಿ ಸಿಬಿ ರಿಷ್ಯಂತ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT