ಕಾರು ವಶಕ್ಕೆ ಪದದ ಅಧಿಕಾರಿಗಳು 
ರಾಜ್ಯ

ಯುಬಿ ಸಿಟಿ ಬಳಿ ಆರ್'ಟಿಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ: 15 ಐಷಾರಾಮಿ ಕಾರುಗಳು ವಶಕ್ಕೆ

ಆರ್ ಟಿ ಒ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಆರ್ ಟಿ ಒ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಹೆಸರಿನಲ್ಲಿರುವ ರೋಲ್ಸ್ ರಾಯ್ ಕಾರು, ಪರಿಷತ್ ಸದಸ್ಯ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನು ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ.

ಇನ್ಶುರೆನ್ಸ್ ಇಲ್ಲದ, ಸೂಕ್ತ ದಾಖಲೆ ಇಲ್ಲದ, ಬೇರೆ ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿ, ಒಂದೇ ನಂಬರ್ ನಲ್ಲಿ ಬೇರೆ ಬೇರೆ ಕಾರುಗಳು ಓಡಾಟ ಮಾಡುತ್ತಿರುವುದನ್ನು ಕಾರ್ಯಾಚರಣೆ ವೇಳೆ ಆರ್‌ಟಿಒ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು 15 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. 

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್‌ ವಾಹನ ನಿರೀಕ್ಷಕರಾದ ಸುಧಾಕರ್‌, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್‌, ರಂಜಿತ್‌, ರಾಜೇಶ್‌ ಮತ್ತು ರಾಜ್‌ ಕುಮಾರ್‌ ಅವರನ್ನ ಒಳಗೊಂಡ ತಂಡ ಇಂದು ಕಾರ್ಯಾಚರಣೆ ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?