ಸಂಗ್ರಹ ಚಿತ್ರ 
ರಾಜ್ಯ

ಕಾಲೇಜುಗಳು ಪುನರಾರಂಭ ಬಳಿಕ ದಕ್ಷಿಣ ಕನ್ನಡದಲ್ಲಿ 600 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್!

ಕಾಲೇಜುಗಳು ಪುನರಾರಂಭಗೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 600 ಮಂದಿ ವಿದ್ಯಾರ್ಥಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಕಾಲೇಜುಗಳು ಪುನರಾರಂಭಗೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 600 ಮಂದಿ ವಿದ್ಯಾರ್ಥಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

ಸೋಂಕು ತಗಲಿದ ವಿದ್ಯಾರ್ಥಿಗಳಲ್ಲಿ ಬಹುತೇಕರು ನೆರೆರಾಜ್ಯ ಕೇರಳ ಮೂಲದವರೆಂದು ಹೇಳಲಾಗುತ್ತಿದೆ. ವಾರಗಳ ಹಿಂದಷ್ಟೇ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಇದೀಗ ಭೌತಿಕ ತರಗತಿಗಳೂ ಕೂಡ ಆರಂಭವಾಗಿದ್ದು, ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 29 ಸಂಸ್ಥೆಗಳನ್ನು ಈಗಾಗಲೇ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. 

ದಕ್ಷಿಣ ಕನ್ನಡಯ ಕೋವಿಡ್ -19 ಗಾಗಿ ನೇಮಕಗೊಂಡಿರುವ ಜಿಲ್ಲಾ ನೋಡಲ್ ಅಧಿಕಾರಿ ಡಾ ಅಶೋಕ್ ಅವರು ಮಾತನಾಡಿ, ಪರೀಕ್ಷೆ ಹಾಗೂ ಭೌತಿಕ ತರಗತಿ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದ ಬಹುತೇಕ ಕಾಲೇಜುಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. "ಕಳೆದ ಕೆಲವು ವಾರಗಳಲ್ಲಿ ಪರೀಕ್ಷೆಗೆ ಹಾಜರಾದ ಹೆಚ್ಚಿನ ವಿದ್ಯಾರ್ಥಿಗಳು, ಕೆಲವು ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ವಿಫಲವಾದ ಕಾರಣ ಕೋವಿಡ್ ಸೋಂಕಿಗೊಳಗಾಗಿದ್ದಾರೆಂದು ಹೇಳಿದ್ದಾರೆ. 

ಸೋಂಕು ತಗುಲಿದ ವಿದ್ಯಾರ್ಥಿಗಳು ತಮ್ಮ ತಮ್ಮ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಗೊಳಗಾಗಿದ್ದಾರೆ. ಕೆಲವರು ಫ್ಲ್ಯಾಟ್ ಗಳಲ್ಲಿ, ಇನ್ನೂ ಕೆಲವರು ಕೋವಿಡ್ ಕೇರ್ ಕೇಂದ್ರಗಳಲ್ಲಿದ್ದಾರೆಂದು ತಿಳಿದುಬಂದಿದೆ. 

ಆರೋಗ್ಯ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಜಿಲ್ಲೆಯಲ್ಲಿ ಈ ವರೆಗೂ ಒಟ್ಟು 620 ಮಂದಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಈಗಾಗಲೇ ಕೆಲ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ನಿಲ್ಲಿಸುವಂತೆ ಸೂಚನೆಯನ್ನೂ ನೀಡಿದೆ ಎಂದು ವರದಿಗಳು ತಿಳಿಸಿವೆ. 

ವೈದ್ಯಕೀಯ ಹಿನ್ನೆಲೆಯುಳ್ಳವರಿಗೆ ಮಾತ್ರ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಾಕಷ್ಟು ವಿದ್ಯಾರ್ಥಿಗಳು ಕ್ವಾರಂಟೈನ್ ಗೊಳಗಾಗಿಲ್ಲ. ಕ್ವಾರಂಟೈನ್ ನಲ್ಲಿರಬೇಕಾದ ವಿದ್ಯಾರ್ಥಿಗಳು ಇತರೆ ಹಾಸ್ಟೆಲ್ ಗಳಲ್ಲಿ ಇತರೆ ವಿದ್ಯಾರ್ಥಿಗಳೊಂದಿಗೆ ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದಾರೆ. ಕ್ವಾರಂಟೈನ್ ಗೊಳಗಾಗುವಂದೆ ವಿದ್ಯಾರ್ಥಿಗೆ ಸೂಚನೆ ನೀಡಿದರೆ, ಮನೆಗೆ ಹೋಗಿದ್ದಾರೆ. ಇದೀಗ ಶಿಕ್ಷಣ ಸಂಸ್ಥೆ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 

ಪ್ರಾಥಮಿಕ ಸಂಪರ್ಕದಲ್ಲಿದ್ದ ಅನೇಕ ವಿದ್ಯಾರ್ಥಿಗಳು ಕ್ವಾರಂಟೈನ್ ಆಗಿರಲಿಲ್ಲ. ಕ್ವಾರಂಟೈನ್‌ನಲ್ಲಿ ಇರಬೇಕಾದ ವಿದ್ಯಾರ್ಥಿಗಳು ಸಾಮಾನ್ಯ ಊಟದ ಕೊಠಡಿಯನ್ನು ಬಳಸುತ್ತಿದ್ದರು ಮತ್ತು ಅವರನ್ನು ಒಂದೇ ಕಡೆಯಲ್ಲಿ ಇರಿಸಲಾಯಿತು. ಸಂಪರ್ಕತಡೆಯನ್ನು ಕೇಳಿದ ವಿದ್ಯಾರ್ಥಿಗಳಲ್ಲಿ ಒಬ್ಬರು ಮನೆಗೆ ಹೋದರು, ಮತ್ತು ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಾ ಅಶೋಕ್ ತಿಳಿಸಿದ್ದಾರೆ. 

ಈ ನಡುವೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಬೆ ನಡೆಸಿದ ಬಳಿಕ ಮಾತನಾಡಿರುವ, ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ರಾಜೇಂದ್ರ ಕೆ ವಿ ಅವರು, ಕೋವಿಡ್ ನೆಗೆಟಿವ್ ವರದಿ ನೀಡಿದ್ದ 900 ಮಂದಿ ವಿದ್ಯಾರ್ಥಿಗಳ ಪೈಕಿ 600 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ, ಕ್ವಾರಂಟೈನ್ ಅವಧಿಯನ್ನು ಸೂಕ್ತ ರೀತಿಯಲ್ಲಿ ಅನುಸರಣೆ ಮಾಡದೇ ಹೋದರಲ್ಲಿ ಎಫ್ಐಆರ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!