ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,224 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,42,250ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,206ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 309 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,35,910ಕ್ಕೆ ಏರಿಕೆಯಾಗಿದೆ. ಇನ್ನು 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1,668 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,85,700ಕ್ಕೆ ಏರಿಕೆಯಾಗಿದೆ. ಇನ್ನು 19,318 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,95,966 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,224 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.62ಕ್ಕೆ ಇಳಿದಿದೆ.