ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) 
ರಾಜ್ಯ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಆದೇಶ

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ಬಂದಿಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ  ಶಿಕ್ಷೆ ಸಿಗುವುದು ಖಂಡಿತ, ಈ ನಿಟ್ಟಿನಲ್ಲಿ ಕೂಡಲೇ ಪೊಲೀಸರು ಕಾರ್ಯತತ್ಪರರಾಗಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ. 

ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಸಭೆ: ಘಟನೆ ಮೈಸೂರು ಸೇರಿದಂತೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಇಂದು ಸಂಜೆ ಅಧಿಕಾರಿಗಳು, ಜನಪ್ರತಿನಿಧಿಗಳ ತುರ್ತು ಸಭೆ ಕರೆದಿದ್ದಾರೆ. ಅದರಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆಯಾಗಲಿದೆ.

ನಾಳೆ ಗೃಹ ಸಚಿವರ ಭೇಟಿ: ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ ಸೂಕ್ತ ನಿರ್ದೇಶನ ನೀಡಲು ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ ನಾಳೆ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. 

ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಜೊತೆ ಚರ್ಚೆ ನಡೆಸಲು ದೆಹಲಿಗೆ ಬಂದಿದ್ದು ಇಂದು ಕೃಷಿ ಸಚಿವರನ್ನು ಭೇಟಿ ಮಾಡುತ್ತಿದ್ದೇನೆ. ಸೆಪ್ಟೆಂಬರ್ 5ರಂದು ರೈತರ ಮಕ್ಕಳಿಗೆ ಕೃಷಿ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ನಡೆಯಲಿದ್ದು ಅದಕ್ಕೆ ಕೃಷಿ ಸಚಿವರಿಗೆ ಆಹ್ವಾನ ನೀಡಲಿದ್ದೇನೆ ಎಂದರು.

ನಾಳೆ ಜಲಶಕ್ತಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಮೇಕೆದಾಟು, ಮಹದಾಯಿ ಯೋಜನೆಗಳ ಕುರಿತು ಮಾತುಕತೆ ನಡೆಸಿ ಅದರ ಸಾಧಕ ಬಾಧಕಗಳ ಬಗ್ಗೆ, ಅಂತಾರಾಜ್ಯ ಜಲ ವಿವಾದ ಬಗ್ಗೆ ಕಾನೂನು ತಂಡದ ಜೊತೆಗೆ ಚರ್ಚಿಸಲಿದ್ದೇನೆ ಎಂದರು.

ನಂತರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹೆದ್ದಾರಿಗಳ ಬಗ್ಗೆ, ವಿತ್ತ ಸಚಿವೆಯನ್ನು ಭೇಟಿ ಮಾಡಿ ಕೇಂದ್ರದ ಹಣಕಾಸು ಯೋಜನೆಗಳು ಮತ್ತು ಹೆಚ್ಚಿನ ನೆರವನ್ನು ಕೇಳಲಿದ್ದೇನೆ ಎಂದರು.

ಹೆಚ್ಚಿನ ಲಸಿಕೆ ಪೂರೈಕೆಗೆ ಮನವಿ: ನಾಳೆ ಕೇಂದ್ರ ಆರೋಗ್ಯ ಸಚಿವರನ್ನು ಕೂಡ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ ರಾಜ್ಯಕ್ಕೆ ಹೆಚ್ಚಿನ ಕೊರೋನಾ ಲಸಿಕೆ ಪೂರೈಕೆಗೆ ಮನವಿ ಮಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!