ಮೈಸೂರು: ಲಲಿತಾದ್ರಿಪುರ ಹೊರವಲಯದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಪೊಲೀಸರ ತನಿಖೆ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಳೆ. ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ನಿರ್ಜನ ಪ್ರದೇಶಕ್ಕೆ ನಿನ್ನೆ ಸಂಜೆ ಇಬ್ಬರು ತೆರಳಿದ್ದಾರೆ.
ಈ ವೇಳೆ ಅಲ್ಲಿಗೆ ಬಂದ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.