ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 
ರಾಜ್ಯ

ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು: ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ  ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 'ವಿಶ್ವಸಂಸ್ಥೆ 2023 ರ ವರ್ಷವನ್ನು ಸಿರಿಧಾನ್ಯಗಳ ವರ್ಷ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಮುಖವಾಗಿ ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇಶದಲ್ಲಿ ಪಾರಂಪರಿಕವಾಗಿ ಸಿರಿಧಾನ್ಯಗಳನ್ನು ಬೆಳೆಯುತ್ತಿರುವ ರಾಜ್ಯಗಳಿವೆ. ಆದರೆ ಇವುಗಳಿಗೆ ಪೂರಕ ವಾತಾವರಣ ಇಲ್ಲದಿದ್ದರೂ ಉತ್ತರಾಕಂಡ ರಾಜ್ಯ ಈ ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯುವುದರಲ್ಲಿ ಮುಂಚೂಣಿಯಲ್ಲಿದ್ದು, ಗುಣಮಟ್ಟವನ್ನೂ ಕಾಯ್ದುಕೊಂಡಿದೆ ಎಂದು ಹೇಳಿದರು.

ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಂಗವಾಗಿ ತೋಟಗಾರಿಕಾ ರಪ್ತುದಾರರ ಸಮಾವೇಶವನ್ನು ಸೆ. 26. ರಂದು ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಬೆಳೆ ವಿಮೆ ನೀಡಲು ರೈತರೇ ನಿರ್ಧರಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ. ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು. ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ ಮಾಡಲಾಗಿದೆ. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ. 57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ. ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇಜಿ ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು. ಎಫ್ ಪಿ ಒ ಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್.ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾ ದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ. ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ. ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ
ಇದೇ ಸಂದರ್ಭದಲ್ಲಿ ಕೃಷಿ ವಿರೋಧಿ ಹೋರಾಟದ ಬಗ್ಗೆ ಮಾತನಾಡಿದ ಅವರು, ಅಂತೆಯೇ ವರ್ಷದಿಂದ ವರ್ಷಕ್ಕೆ ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದ ಅವರು, ಕೃಷಿ ಲಾಭದಾಯಕವಲ್ಲವೆಂದು ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಕೃಷಿಯಿಂದ ಬರುವ ಆದಾಯ ಗಣನೀಯವಾಗಿ ಹೆಚ್ಚಾದರೆ ಮಾತ್ರ ಈ ವಲಸೆಯನ್ನು ತಡೆಯಲು ಸಾಧ್ಯ. ಆದ್ದರಿಂದ ಕೃಷಿಕರ ಆದಾಯ ಹೆಚ್ಚಳ ಮಾಡುವತ್ತ ಗಮನ ನೀಡಲಾಗಿದೆ ಎಂದರು.

ರೈತರೊಂದಿಗೆ ಮಾತುಕತೆಗೆ ಈಗಲೂ ಸರ್ಕಾರ ಬದ್ಧ
ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಬಿಲ್‌ಗಳ ಬಗ್ಗೆ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ಜಾರಿಗೆ ತರಲಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಅಂತ ಹೇಳಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ದವಿದೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!