ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 310 ಸೇರಿ ಇಂದು 1,229 ಪ್ರಕರಣ ಪತ್ತೆ, 13 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,229 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 28 Aug 2021, 7:04 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,229 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,261ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

Advertisement

Advertisement

ಬೆಂಗಳೂರಿನಲ್ಲಿ ಇಂದು 310 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,36,925ಕ್ಕೆ ಏರಿಕೆಯಾಗಿದೆ. ಇನ್ನು ನರಗದಲ್ಲಿ ಶೂನ್ಯ ಸಾವು ವರದಿಯಾಗಿದೆ.

ರಾಜ್ಯದಲ್ಲಿ ಇಂದು 1,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,89,809ಕ್ಕೆ ಏರಿಕೆಯಾಗಿದೆ. ಇನ್ನು 18,897 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,83,642 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,229 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.66ಕ್ಕೆ ಇಳಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments