ರಾಜ್ಯ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ, ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ 

Nagaraja AB

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಹೆಚ್. ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ ಡಾ. ಪುಷ್ಪಾ ಅಮರ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳಿಗೆ ಯಾವ ರಕ್ಷಣೆಯೂ ಇಲ್ಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು,ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಅಸಮರ್ಥ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹೆಣ್ಣು ಮಕ್ಕಳು ಹೊರಹೋಗಬಾರದು ಎಂಬ ತಾಲಿಬಾನ್ ಮಾದರಿಯ ಫಾರ್ಮಾನುಗಳು ಹೊರಡುತ್ತಿವೆ. ಹಾಗಾದರೆ ಸರ್ಕಾರ, ಗೃಹ ಇಲಾಖೆ, ಸಚಿವರು, ಪೊಲೀಸರು ಇರುವುದೇಕೆ? ಜನರು ತೆರಿಗೆ ಪಾವತಿಸುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದು, ಜನರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲಾಗದ ಬಿಜೆಪಿಗೆ ಅಧಿಕಾರವೇಕೆ ಎಂದು ಟೀಕಿಸಿದೆ.

SCROLL FOR NEXT