ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಲಸಿಕಾ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ: ಶೇ.96ರಷ್ಟು ಗುರಿ ಸಾಧನೆ

ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಕೋವಿಡ್‌ ಲಸಿಕಾ ಮೇಳ’ದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. 

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಕೋವಿಡ್‌ ಲಸಿಕಾ ಮೇಳ’ದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. 

ಲಸಿಕಾ ಮೇಳದಲ್ಲಿ 1.25 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಖಾಸಗಿ ಕೇಂದ್ರಗಳು ಸೇರಿದಂತೆ 1.64 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. 

ಆಯಾ ವಾರ್ಡ್‌ಗಳಲ್ಲಿ ಆರೋಗ್ಯ ವೈದ್ಯಾಧಿಕಾರಿಗಳು ಅಲ್ಲಿಯ ಬೇಡಿಕೆಗೆ ತಕ್ಕಂತೆ ಯೋಜನೆ ರೂಪಿಸಿಕೊಂಡ ಶಿಬಿರ ನಡೆಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಾರ್ಡ್ ಕಚೇರಿ, ಸರ್ಕಾರಿ ಆಸ್ಪತ್ರೆಗಳು, ಶಾಲಾ, ಕಾಲೇಜು ಆವರಣ, ಕಲ್ಯಾಣ ಮಂಟಪ, ಕಟ್ಟಡಗಳ ನಿರ್ಮಾಣದ ಸ್ಥಳ, ಅಪಾರ್ಟ್‌ಮೆಂಟ್‌ ಸಮುಚ್ಚಯ, ಕಾರ್ಖಾನೆಗಳು ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಲಸಿಕಾ ಮೇಳವನ್ನು ನಡೆಸಲಾಯಿತು.

ಬೆಸ್ಕಾಂ ಸಿಬ್ಬಂದಿ, ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಭದ್ರತಾ ಸಿಬ್ಬಂದಿ, ಕಟ್ಟಡ ನಿರ್ಮಾಣ ಕಾರ್ಮಿಕರು, ಅನಾಥಾಶ್ರಮದಲ್ಲಿರುವವರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು. 

ಇದರಂತೆ ಬಿಬಿಎಂಪಿ ಪೂರ್ವ ವಲಯದಲ್ಲಿ ಶೇ.100, ದಕ್ಷಿಣ ವಲಯದಲ್ಲಿ ಶೇ.101%, ಪಶ್ಚಿಮ ವಲಯದಲ್ಲಿ ಶೇ.103 ಮತ್ತು ಬೊಮ್ಮನಹಳ್ಳಿಯಲ್ಲಿ ಶೇ.121, ಮಹಾದೇವಪುರದಲ್ಲಿ ಶೇ.85, ರಾಜರಾಜೇಶ್ವರಿ ನಗರದಲ್ಲಿ ಶೇ.75, ಯಲಹಂಕದಲ್ಲಿ ಶೇ.74 ಮತ್ತು ದಾಸರಹಳ್ಳಿಯಲ್ಲಿ ಶೇ.69 ಗುರಿ ಸಾಧಿಸಲಾಗಿದೆ. 

ನಿನ್ನೆ ಒಂದೇ ದಿನ 71,564 ಜನರು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದರೆ, 93,223 ಮಂದಿ ಎರಡನೇ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಇದರಂತೆ ಒಟ್ಟಾರೆ 1,64,787 ಮಂದಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)