ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ ಕಾರ್ಯಾಚರಣೆ: ಪೊಲೀಸರಿಗೆ ಸರ್ಕಾರದಿಂದ 5 ಲಕ್ಷ ರೂ ಬಹುಮಾನ!

ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನೀಚ ಕೃತ್ಯ ಎಸಗುವವರನ್ನು ಸುಮ್ಮನೆ ಬಿಡುವುದಿಲ್ಲ, ತಕ್ಕ ಶಾಸ್ತಿಯನ್ನು ಪೊಲೀಸರು ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಜನತೆಗೆ ಇದರಿಂದ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಹೆಚ್ಚುತ್ತದೆ ಎಂದರು.

ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಮತ್ತು ದೇಶ-ವಿದೇಶಗಳಿಂದ ಪ್ರವಾಸಿಗರು ಬರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂತಹ ಅಮಾನವೀಯ ಕೃತ್ಯ ನಡೆದಾಗ ಸಹಜವಾಗಿ ಎಲ್ಲರಿಗೂ ಬೇಸರ, ಆತಂಕ ಉಂಟಾಗಿತ್ತು. ಸರ್ಕಾರದಲ್ಲಿ ನಾನು ಮತ್ತು ಮುಖ್ಯಮಂತ್ರಿಗಳು ಪೊಲೀಸ್ ವರಿಷ್ಠರನ್ನು ಕರೆದು ಈ ಪ್ರಕರಣಗಳನ್ನು ಭೇದಿಸಿ, ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಸೂಚಿಸಿದ್ದೆವು, ಇದೀಗ ಪೊಲೀಸರು ಆರೋಪಿಗಳ ಬಂಧಿಸುವ ಮೂಲಕ ತೆರೆಬಿದ್ದಿದೆ ಎಂದರು.

ನಗದು ಬಹುಮಾನ: ಪ್ರಕರಣ ಬೆಳಕಿಗೆ ಬಂದು 85 ಗಂಟೆಗಳಲ್ಲಿ ಹಗಲು-ರಾತ್ರಿ ಯಶಸ್ವಿ ಕಾರ್ಯಾಚರಣೆ ನಡೆಸಿ ಪೊಲೀಸರು ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಆರೋಪಿಗಳ ಹಿನ್ನೆಲೆ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಹಾಗಾಗಿ ನಾನು ಹೆಚ್ಚು ಹೇಳುವುದಿಲ್ಲ. ಐವರನ್ನು ಬಂಧಿಸಿಯಾಗಿದೆ, ಮುಂದೆ ಶಿಕ್ಷೆ ನೀಡುವುದು ಮುಖ್ಯವಾಗುತ್ತದೆ, ಇನ್ನೊಬ್ಬ ಆರೋಪಿಯನ್ನು ಬಂಧಿಸಬೇಕಿದೆ ಎಂದು ಕೂಡ ಗೃಹ ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT