ರಾಜ್ಯ

ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

Lingaraj Badiger

ಹಾವೇರಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ‌ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ‌ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ ಎಂದರು.

ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ 62 ಕೋಟಿ ರೂಪಾಯಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. 11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

SCROLL FOR NEXT