ರಾಜ್ಯ

'ನವ ಕರ್ನಾಟಕ ಫಾರ್ ನವ ಭಾರತ' ಇದು ನನ್ನ ಸ್ಲೋಗನ್, ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ 

Sumana Upadhyaya

ಬೆಂಗಳೂರು: ಮುಂದಿನ 20 ದಿನಗಳಲ್ಲಿ ನನ್ನ ಡ್ಯಾಶ್ ಬೋರ್ಡ್ ಆರಂಭವಾಗಲಿದೆ. ಅದರಲ್ಲಿ ಪ್ರತಿಯೊಂದು ಮಾಹಿತಿ ಸಿಗಲಿದೆ. ನನ್ನ ಪ್ರತಿನಿತ್ಯದ ಮೊದಲ ಸಮಯವನ್ನು ಬೆಂಗಳೂರು ನಗರ ಅಭಿವೃದ್ಧಿಗೆ ಮೀಸಲಿಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮೈಸೂರು ರಸ್ತೆಯ ಕೆಂಗೇರಿ-ಬೈಯಪ್ಪನಹಳ್ಳಿ ಮೆಟ್ರೊ ಮಾರ್ಗವನ್ನು ನಾಯಂಡಹಳ್ಳಿ ಮೆಟ್ರೊ ರೈಲು ನಿಲ್ದಾಣದಲ್ಲಿ ಉದ್ಘಾಟಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋಗೆ ಒಪ್ಪಿಗೆ ನೀಡಿದವರು ಅಂದಿನ ಪ್ರಧಾನಿಯಾಗಿದ್ದ ವಾಜಪೇಯಿಯವರು. ಬೆಂಗಳೂರು ಏರ್ ಪೋರ್ಟ್ ಗೆ ಒಪ್ಪಿಗೆ ಕೊಟ್ಟವರು ಕೂಡ ಅವರೇ. ಬೆಂಗಳೂರಿಗೆ ಸಬ್ ಅರ್ಬನ್ ಯೋಜನೆಗೆ ಒಪ್ಪಿಗೆ ಕೊಟ್ಟಿದ್ದು ಮೋದಿ. ‘ನವ ಕರ್ನಾಟಕ ಫಾರ್ ನವ ಭಾರತ’ ಇದು ನನ್ನ ಸ್ಲೋಗನ್ ಎಂದರು.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಹೈ ಸ್ಪೀಡ್ ರೈಲು, ಸಬ್ ಅರ್ಬನ್ ಹಾಗೂ ಮೆಟ್ರೋ ರೈಲು ಮಾರ್ಗದ ವ್ಯವಸ್ಥೆ ಮಾಡುತ್ತಿದ್ದೇವೆ. ಬೇರೆ ಯಾವ ನಗರದಲ್ಲಿಯೂ ಇಂತಹ ವ್ಯವಸ್ಥೆ ಇಲ್ಲ. ನಗರದಲ್ಲಿ ಹೆಚ್ಚು ಟ್ರಾಫಿಕ್ ರಸ್ತೆಗಳನ್ನು ಗುರುತಿಸಲಾಗಿದೆ. ಟ್ರಾಫಿಕ್ ಇರುವ ಕಡೆ ಆಟೋಮ್ಯಾಟಿಕ್ ಸಿಗ್ನಲ್ ವ್ಯವಸ್ಥೆ ಹಾಗೂ ಮುಖ್ಯ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಟ್ರಾಫಿಕ್ ಫ್ರೀ ರಸ್ತೆ ಮಾಡಲು ಚಾಲನೆ ನೀಡಲಾಗಿದೆ ಎಂದರು.

ರಾಮನಗರ, ರಾಜಾನುಕುಂಟೆ, ಮಾಗಡಿಯವರೆಗೆ ವಿಸ್ತರಿಸಲು ಚಿಂತನೆ: ನಮ್ಮ ಮೆಟ್ರೋ ಸಂಚಾರವನ್ನು ರಾಮನಗರವರೆಗೂ ವಿಸ್ತರಿಸುವ ಚಿಂತೆಯಿದೆ. ರಾಮನಗರ, ರಾಜಾನುಕುಂಟೆ, ಮಾಗಡಿವರೆಗೂ ಮೆಟ್ರೋ ಮಾರ್ಗ ವಿಸ್ತರಿಸುವ ಗುರಿಯಿದೆ. ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಮೆಟ್ರೋ ಅಗತ್ಯವಾಗಿದೆ. ಹೀಗಾಗಿ ನಾಯಂಡಹಳ್ಳಿ-ಕೆಂಗೇರಿಯವರೆಗೆ ಮೆಟ್ರೋ ಅಗತ್ಯ ಇತ್ತು. ನಮ್ಮ ಮೆಟ್ರೋ ಬೆಂಗಳೂರಿನ ಭವಿಷ್ಯದ ಕೊಂಡಿ. ದೇಶ-ವಿದೇಶಗಳಿಂದ ಬರುವ ಗಣ್ಯರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಮೆಟ್ರೊ ಪೂರೈಸಲಿದೆ ಎಂದರು.

SCROLL FOR NEXT