ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 287 ಸೇರಿ ಇಂದು 1,217 ಪ್ರಕರಣ ಪತ್ತೆ; 25 ಸಾವು!

ಕೊರೋನಾ ಎರಡನೇ ಅಲೆಯಲ್ಲಿ ಮೊದಲ ಬಾರಿಗೆ ಸಾವಿರಕ್ಕಿಂತ ಕಡಿಮೆ ಬಂದಿದ್ದ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,217 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಮೊದಲ ಬಾರಿಗೆ ಸಾವಿರಕ್ಕಿಂತ ಕಡಿಮೆ ಬಂದಿದ್ದ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,217 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,318ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 287 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,837ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,93,715ಕ್ಕೆ ಏರಿಕೆಯಾಗಿದೆ. ಇನ್ನು 18,386 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,28,657 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,217 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.94ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್