ರಾಜ್ಯ

ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

Nagaraja AB

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಮೋಟಗೋಂಡನಹಳ್ಳಿಯಲ್ಲಿ ಸುಮಾರು ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಯಾಣಿ ಅಭಿವೃದ್ಧಿ ಮಾಡಲಾಗಿದೆ ಎಂದಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಇಂತಹ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಮಾಗಡಿ ತಾಲೂಕ್ ಒಂದರಲ್ಲಿಯೇ 100 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT