ರಾಜ್ಯ

ಓಮಿಕ್ರಾನ್ ಆತಂಕ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಸಂಖ್ಯೆಯಲ್ಲಿ ಏರಿಕೆ: ಇಂದು 322 ಪ್ರಕರಣ ಪತ್ತೆ; ಇಬ್ಬರ ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 322 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,96,470ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,213ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 165 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,56,617ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,51,654ಕ್ಕೆ ಏರಿಕೆಯಾಗಿದೆ. ಇನ್ನು 6,574 ಸಕ್ರಿಯ ಪ್ರಕರಣಗಳಿವೆ.

SCROLL FOR NEXT