ವಿದೇಶಿ ಪ್ರಯಾಣಿಕರು 
ರಾಜ್ಯ

ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗಾಗಿ ರಾಜ್ಯದಲ್ಲಿ ಪ್ರತ್ಯೇಕ ವಾರ್ಡ್‌ಗಳ ಸ್ಥಾಪನೆ: ಸಚಿವ ಸುಧಾಕರ್

ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

ಒಮಿಕ್ರಾನ್ ವೈರಸ್ ಸೋಂಕಿತರು ಕಂಡುಬಂದರೆ ಅವರಿಗೆ ಆಸ್ಪತ್ರೆಗಳಲ್ಲಿ ವಿಶೇಷ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜೊತೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಇಲಾಖೆ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಿದೆ ಎಂದರು.

ಹೊರ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಇಂದಿನಿಂದ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ವಿದೇಶದಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಡುವ ಆರ್ ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ ಅಲ್ಲಿ ಅವರನ್ನು 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ಕ್ವಾರಂಟೈನ್ ನಲ್ಲೇ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ರೋಗ ಲಕ್ಷಣ ಇರುವವರಿಗೆ, ಆರ್ ಟಿಪಿಸಿಆರ್ ವರದಿ  ನೆಗೆಟಿವ್ ಬಂದರೆ, 5ನೇ ದಿನ ಅವರನ್ನು ಮತ್ತೆ  ಪರೀಕ್ಷೆ ಮಾಡಲಾಗುವುದು. ಅದರಲ್ಲೂ ನೆಗೆಟಿವ್ ವರದಿ ಬಂದರೆ 7 ದಿನಗಳ ಬಳಿಕ ಅವರು ಕ್ವಾರಂಟೈನ್ ನಿಂದ ಹೊರಬರಬಹುದು. ಒಂದು ವೇಳೆ ಆರ್ ಟಿಪಿಸಿಆರ್ ವರದಿಯಲ್ಲಿ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ಕೊಡಲಾಗುತ್ತದೆ. ಪರೀಕ್ಷೆ ಕಡ್ಡಾಯವಾಗಿರುವುದರಿಂದ ಪ್ರಯಾಣಿಕರಿಗೆ ಸ್ವಲ್ಪ ತಡವಾಗಬಹುದು. ಆದರೆ ಇದು ಅನಿವಾರ್ಯ ಎಂದು ತಿಳಿಸಿದರು.

ಓಮಿಕ್ರಾನ್ ವೈರಸ್ ಸೋಂಕಿತರು ಕಂಡುಬಂದರೆ ಅವರಿಗೆ ಆಸ್ಪತ್ರೆಗಳಲ್ಲಿ ವಿಶೇಷ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜೊತೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಇಲಾಖೆ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಿದೆ ಎಂದರು.

ಬೂಸ್ಟರ್ ಬಗ್ಗೆ ಚರ್ಚೆ:
ಡಿಸೆಂಬರ್ 2 ಅಥವಾ 3 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ.  ಬೂಸ್ಟರ್ ಡೋಸ್ ಬಗ್ಗೆ ವೈಜ್ಞಾನಿಕವಾದ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಟೆಲಿ ಮಡಿಸಿನ್, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಮತ್ತು ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜೊತೆ ಕೈ ಜೋಡಿಸಿದರೆ ಬೇಗನೆ ಆತಂಕದಿಂದ ಹೊರಬರಬಹುದು. ಓಮಿಕ್ರಾನ್ ಮಣಿಸಲು ಜಾಗೃತಿ ಮತ್ತು ಜಾಗ್ರತೆ ಎರಡೂ ಬೇಕು ಎಂದು ತಿಳಿಸಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂದು ಸಲಹೆ ನೀಡಿತ್ತು. ಆದರೆ ಸರ್ಕಾರ ಅದನ್ನು ಮಾಡುವುದಿಲ್ಲ. ಬದಲಾಗಿ ಲಸಿಕೆ ಪಡೆಯದಿರುವವರ ಮನ ಒಲಿಸಿ ಅವರನ್ನು ಲಸಿಕೆ ಪಡೆಯುವಂತೆ ಮಾಡಲಾಗುವುದು. ಕಳೆದ ಎರಡು ದಿನಗಳಿಂದ ಲಸಿಕೆ ತೆಗೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಫಲಪ್ರದವಾಗಿದೆ ಎಂದು ತಿಳಿಸಿದರು.

ಓಮಿಕ್ರಾನ್ ಮಕ್ಕಳ ಮೇಲೆ ಪ್ರಭಾವ ಬೀರುವ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಇದು ಬಹಳ ವೇಗವಾಗಿ ಹರಡುವ ವೈರಸ್ ಎಂದು ತಿಳಿದುಬಂದಿದೆ. ಮಕ್ಕಳ ಲಸಿಕೆ ಬಗ್ಗೆ ಕೂಡ ಕೇಂದ್ರ ಸರ್ಕಾರ ಚರ್ಚೆ ಮಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಮಕ್ಕಳ ಲಸಿಕೆ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT