ರಾಜ್ಯ

ಕೆಜಿಎಫ್ ಕೈಗಾರಿಕಾ ಸಂಕೀರ್ಣ ಕುರಿತು ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಸಚಿವ ಮುರುಗೇಶ್ ನಿರಾಣಿ ಸೂಚನೆ

Manjula VN

ಬೆಂಗಳೂರು: ಕೋಲಾರ ಗೋಲ್ಡ್ ಫೀಲ್ಡ್ಸ್‌ನಲ್ಲಿ (ಕೆಜಿಎಫ್) ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್‌ಗೆ (ಬಿಜಿಎಂಎಲ್) ಸೇರಿದ ಸುಮಾರು 3,000 ಎಕರೆಗೂ ಹೆಚ್ಚು ಬಳಕೆಯಾಗದ ಭೂಮಿ ಕುರಿತು ಸಮೀಕ್ಷೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಬೆಂಗಳೂರಿನಿಂದ 100 ಕಿಮೀ ದೂರದಲ್ಲಿರುವ ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲು ಯೋಜಿಸಿದೆ. ಈ ಯೋಜನೆಯಿಂದ ಕೋಲಾರ, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಸಾವಿರಾರು ಜನರಿಗೆ ಉದ್ಯೋಗಾವಕಾಶ ದೊರೆಯುವುದರಿಂದ ಸಮೀಕ್ಷೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಂಗಳವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಆಗಸ್ಟ್ 11 ರಂದು ನಿರಾಣಿ ಅವರು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದ್ದರು. ಕೈಗಾರಿಕಾ ಟೌನ್‌ಶಿಪ್ ಅಭಿವೃದ್ಧಿಪಡಿಸಲು ಕೆಜಿಎಫ್‌ನಲ್ಲಿನ ಭೂಮಿ ಬಳಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.

SCROLL FOR NEXT